Advertisment

BIG BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

author-image
admin
Updated On
BIG BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ
Advertisment
  • ಸಿಎಂ ವಿರುದ್ಧ ಮೈಸೂರಿನ ಸ್ನೇಹಮಹಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ
  • ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ
  • ಹೈಕೋರ್ಟ್‌ನಲ್ಲಿ ಜನಪ್ರತಿನಿಧಿಗಳ ಕೋರ್ಟ್ ಆದೇಶಕ್ಕೆ ತಡಯಾಜ್ಞೆ ತೆರವು

ಬೆಂಗಳೂರು: ಅಕ್ರಮ ಮುಡಾ ಸೈಟ್‌ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ ನೀಡಿದೆ. 82ನೇ ಸಿಸಿಹೆಚ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಮಹತ್ವದ ಸೂಚನೆ ನೀಡಿದ್ದಾರೆ. ಮೈಸೂರು ಲೋಕಾಯುಕ್ತಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಲು ಕೋರ್ಟ್‌ ನಿರ್ದೇಶನ ನೀಡಿದೆ.

Advertisment

CRPC ಸೆಕ್ಷನ್ 156(3) ಅಡಿ ಕೇಸ್‌ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಅಂದ್ರೆ ಡಿಸೆಂಬರ್ 24 2024ಕ್ಕೆ ತನಿಖಾ ವರದಿ ನೀಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸೂಚನೆ ನೀಡಿದೆ.

publive-image

ಮೈಸೂರಿನ ಸ್ನೇಹಮಹಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಲ್ಲಿ ಅಕ್ರಮ ಮುಡಾ ಸೈಟ್ ಪಡೆದಿದ್ದಾರೆ ಅನ್ನೋ ದೂರು ನೀಡಿದ್ದರು. ಸ್ನೇಹಮಹಿ ಕೃಷ್ಣ ಸಲ್ಲಿಸಿದ್ದ ಪಿಸಿಆರ್ ಬಗ್ಗೆ ಇಂದು 82ನೇ ಸಿಸಿಹೆಚ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆದಿದೆ.

ಕಳೆದ ಆಗಸ್ಟ್ 13ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಆಲಿಸಿ ತೀರ್ಪು ಕಾಯ್ದಿರಿಸಲಾಗಿತ್ತು. ಸ್ನೇಹಮಹಿ ಕೃಷ್ಣ ಪರ ವಕೀಲೆ ಲಕ್ಷ್ಮಿ ಅಯ್ಯಾಂಗಾರ್ ಅವರು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಪೀಠದಲ್ಲಿ ವಾದ ಮಂಡಿಸಿದ್ದರು. ಈ ವಾದ ಆಲಿಸಿದ್ದ ನ್ಯಾಯಪೀಠ 20/8/2024ಕ್ಕೆ ತೀರ್ಪು ಕಾಯ್ದಿರಿಸಿತ್ತು.

Advertisment

ಇದನ್ನೂ ಓದಿ: ಸಿಎಂ ಸಿದ್ದುಗೆ ಅತಿ ದೊಡ್ಡ ಸಂಕಷ್ಟ.. ಅರ್ಜಿ ವಜಾಗೊಂಡಿದ್ದಕ್ಕೆ ಕಾರಣ ಅದೊಂದು ‘ಲಾ’ ಪಾಯಿಂಟ್; ಏನದು? 

ಆದಾದ ನಂತರ ತನಿಖೆಗೆ ಅನುಮತಿ ನೀಡಿದ್ದ ಗವರ್ನರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಜನಪ್ರತಿನಿಧಿಗಳ ಕೋರ್ಟ್ ಆದೇಶಕ್ಕೆ ತಡಯಾಜ್ಞೆ ನೀಡಿತ್ತು. ನಿನ್ನೆ ಹೈಕೋರ್ಟ್ ಏಕಸದಸ್ಯ ಪೀಠ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದ್ದು ಅಧೀನ ನ್ಯಾಯಾಲಯದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ತೆರವು ಮಾಡಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment
Advertisment
Advertisment