newsfirstkannada.com

×

Breaking: ಬಿಜೆಪಿ-ಜೆಡಿಎಸ್​ಗೆ ಬಿಗ್​ ಶಾಕ್; ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್..!

Share :

Published October 23, 2024 at 10:19am

Update October 23, 2024 at 11:29am

    ಬೆಳ್ಳಂಬೆಳಗ್ಗೆ ಡಿಕೆಶಿ ನಿವಾಸಕ್ಕೆ ಬಂದ ಸಿಪಿ ಯೋಗೇಶ್ವರ್

    ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್​​ಗೆ ಸೇರ್ಪಡೆ

    ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕೆ?

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್​ಗೆ ಸೇರ್ಪಡೆ ಆಗಿದ್ದಾರೆ. ಆ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದು ಪಕ್ಕಾ ಆಗಿದೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸಿಪಿ ಯೋಗೇಶ್ವರ್​ ಯಾವ ಪಕ್ಷದಿಂದ ಸ್ಪರ್ಧೆ ಮಾಡ್ತಾರೆ ಹಾಗೂ ಕಾಂಗ್ರೆಸ್​ ಅಭ್ಯರ್ಥಿ ಯಾರು ಅನ್ನೋ ಕುತೂಹಲಗಳಿಗೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಯೋಗೇಶ್ವರ್​​ ಆಗಮಿಸಿದರು. ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್​​ಗೆ ಸೇರುವ ಬಗ್ಗೆ ಮಾತುಕತೆ ನಡೆಸಿದರು.

ಬಳಿಕ ಡಿಕೆ ಶಿವಕುಮಾರ್ ಹಾಗೂ ಸಿಪಿ ಯೋಗೇಶ್ವರ್​ ಒಂದೇ ಕಾರಿನಲ್ಲಿ ಸಿಎಂ ನಿವಾಸಕ್ಕೆ ತೆರಳಿದ್ದರು. ಸಿದ್ದರಾಮಯ್ಯ ನಿವಾಸದಲ್ಲಿ ಯೋಗೇಶ್ವರ್​ ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಆಗಿದ್ದಾರೆ. ಸಿದ್ದರಾಮಯ್ಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಹಾಗೂ ಡಿಕೆ ಸುರೇಶ್ ಸೇರಿ ಹಲವು ಕಾಂಗ್ರೆಸ್​ ನಾಯಕರಿದ್ದರು.

ಯೋಗೇಶ್ವರ್​ಗೆ ಇತ್ತು 3 ಆಫರ್

ಸಿಪಿ ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್​ ಜೆಡಿಎಸ್​ಗೆ ಟಿಕೆಟ್ ನೀಡಲು ತೀರ್ಮಾನಿಸಿತ್ತು. ಇದರಿಂದ ಬಂಡಾಯವೆದ್ದ ಸಿಪಿ ಯೋಗೇಶ್ವರ್, ಎಂಎಲ್​​ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಜೊತೆಗೆ ಚುನಾವಣೆಯಲ್ಲಿ ಪಕ್ಷೇತರ ಅಥವಾ ಕಾಂಗ್ರೆಸ್​ನಿಂದ ಸ್ಪರ್ಧಿಸುವ ಎಚ್ಚರಿಕೆಯನ್ನ ನೀಡಿದ್ದರು. ಸಿಪಿ ಯೋಗೇಶ್ವರ್​ ಬಂಡಾಯ ಏಳುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ಕುಮಾರಸ್ವಾಮಿ, ಜೆಡಿಎಸ್​ ಚಿಹ್ನೆ ಅಡಿಯಲ್ಲಿ ಸ್ಪರ್ಧಿಸುವಂತೆ ಆಫರ್ ನೀಡಿದ್ದರು. ಇದನ್ನು ಯೋಗೇಶ್ವರ್ ತಿರಸ್ಕರಿಸಿದ್ದರು. ಕೊನೆಗೆ ಕುಮಾರಸ್ವಾಮಿ, ಬಿಜೆಪಿಯಿಂದಲೇ ಯೋಗೇಶ್ವರ್ ಸ್ಪರ್ಧಿಸಲು ಒಪ್ಪಿಕೊಂಡಿದ್ದರು ಎಂದು ಹೇಳಲಾಗಿತ್ತು. ಆ ಮೂಲಕ ಸಿಪಿ ಯೋಗೇಶ್ವರ್​ಗೆ ಮೂರು ಪಕ್ಷಗಳಿಂದ ಆಫರ್​ ಪಡೆದುಕೊಂಡಿದ್ದರು. ಆದರೆ ನಿನ್ನೆಯವರೆಗೂ ಗುಟ್ಟು ಬಿಟ್ಟುಕೊಡದ ಯೋಗೇಶ್ವರ್ ಇಂದು ಬೆಳಗ್ಗೆ ಕಾಂಗ್ರೆಸ್​ ಸೇರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಬಿಜೆಪಿ-ಜೆಡಿಎಸ್​ಗೆ ಬಿಗ್​ ಶಾಕ್; ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್..!

https://newsfirstlive.com/wp-content/uploads/2024/10/CPY-1.jpg

Load More