ಮೈತ್ರಿ ರಣ ತಂತ್ರಕ್ಕೆ ಕೈಕೊಟ್ಟ ಸೈನಿಕ; ದಳಪತಿಗೆ ಬಿಗ್​ ಟೆನ್ಶನ್, ಕಾರಣ ಇಲ್ಲಿದೆ..

author-image
Ganesh
Updated On
ಮೈತ್ರಿ ರಣ ತಂತ್ರಕ್ಕೆ ಕೈಕೊಟ್ಟ ಸೈನಿಕ; ದಳಪತಿಗೆ ಬಿಗ್​ ಟೆನ್ಶನ್, ಕಾರಣ ಇಲ್ಲಿದೆ..
Advertisment
  • ಸಿ.ಪಿ ಯೋಗೇಶ್ವರ್​ ಕಾಂಗ್ರೆಸ್​ ಅಭ್ಯರ್ಥಿಯಾಗೋ ಸಾಧ್ಯತೆ
  • ನಾಮಪತ್ರ ಸಲ್ಲಿಸೋಕೆ ಇನ್ನು ಎರಡು ದಿನ ಮಾತ್ರ ಬಾಕಿ
  • ಪ್ರಬಲ ಫೈಟ್​ ನಿಡೋ ಅಭ್ಯರ್ಥಿ ಹುಡುಕೋದೆ ಸವಾಲು

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್​ ಸೇರಿದ್ದಾರೆ. ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರುಗಳನ್ನು ಭೇಟಿ ಮಾಡಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ರಾಜಕಾರಣದಲ್ಲಿ ನಡೆದ ಈ ಮಹತ್ವದ ಬೆಳವಣಿಗೆಯಿಂದಾಗಿ ದಳಪತಿಗಳಿಗೆ ಬಿಗ್ ಶಾಕ್ ಆಗಿದೆ.

ಯಾಕೆಂದರೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿದ್ದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ನವೆಂಬರ್ 13 ರಂದು ಮತದಾನ ನಡೆಯಲಿದ್ದು, 23 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮ ಪತ್ರ ಸಲ್ಲಿಸೋಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಹೀಗಿರುವಾಗ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರಿರೋದು ಬಿಜೆಪಿ-ಜೆಡಿಎಸ್​ ಮೈತ್ರಿಕೂಟಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.

ಆಗಿದ್ದೇನು..?

ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್​ ಜೆಡಿಎಸ್​ಗೆ ಟಿಕೆಟ್ ನೀಡಲು ತೀರ್ಮಾನಿಸಿತ್ತು. ಇದರಿಂದ ಬಂಡಾಯವೆದ್ದ ಸಿಪಿ ಯೋಗೇಶ್ವರ್, ಎಂಎಲ್​​ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಜೊತೆಗೆ ಚುನಾವಣೆಯಲ್ಲಿ ಪಕ್ಷೇತರ ಅಥವಾ ಕಾಂಗ್ರೆಸ್​ನಿಂದ ಸ್ಪರ್ಧಿಸುವ ಎಚ್ಚರಿಕೆಯನ್ನ ನೀಡಿದ್ದರು. ಸಿಪಿ ಯೋಗೇಶ್ವರ್​ ಬಂಡಾಯ ಏಳುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ಕುಮಾರಸ್ವಾಮಿ, ಜೆಡಿಎಸ್​ ಚಿಹ್ನೆ ಅಡಿಯಲ್ಲಿ ಸ್ಪರ್ಧಿಸುವಂತೆ ಆಫರ್ ನೀಡಿದ್ದರು. ಇದನ್ನು ಯೋಗೇಶ್ವರ್ ತಿರಸ್ಕರಿಸಿದ್ದರು. ಕೊನೆಗೆ ಕುಮಾರಸ್ವಾಮಿ, ಬಿಜೆಪಿಯಿಂದಲೇ ಯೋಗೇಶ್ವರ್ ಸ್ಪರ್ಧಿಸಲು ಒಪ್ಪಿಕೊಂಡಿದ್ದರು ಎಂದು ಹೇಳಲಾಗಿತ್ತು. ಆ ಮೂಲಕ ಸಿಪಿ ಯೋಗೇಶ್ವರ್​ಗೆ ಮೂರು ಪಕ್ಷಗಳಿಂದ ಆಫರ್​ ಪಡೆದುಕೊಂಡಿದ್ದರು. ಆದರೆ ನಿನ್ನೆಯವರೆಗೂ ಗುಟ್ಟು ಬಿಟ್ಟುಕೊಡದ ಯೋಗೇಶ್ವರ್ ಇಂದು ಬೆಳಗ್ಗೆ ಕಾಂಗ್ರೆಸ್​ ಸೇರಿದ್ದಾರೆ.

ಇದನ್ನೂ ಓದಿ:Breaking: ಬಿಜೆಪಿ-ಜೆಡಿಎಸ್​ಗೆ ಬಿಗ್​ ಶಾಕ್; ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್..!

ಯೋಗೇಶ್ವರ್​ ಕಾಂಗ್ರೆಸ್​ ಸೇರಿರೋದ್ರಿಂದ ದಳಪತಿಗಳಲ್ಲಿ ತಳಮಳ ಶುರುವಾಗಿದೆ. ಸಿ.ಪಿ ಯೋಗೇಶ್ವರ್ ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗೋ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಯೋಗೇಶ್ವರ್​ ಅವರೇ ಕಣಕ್ಕಿಳಿದರೆ, ಜೆಡಿಎಸ್​ ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸಬೇಕಾಗಿದೆ. ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಮತ್ತೆ ಅನಿತಾ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯ ಹೆಸರು ಕೂಡ ಕೇಳಿ ಬರುತ್ತಿದೆ. ಕಾಂಗ್ರೆಸ್​ ಹಾಗೂ ಸಿಪಿ ಯೋಗೇಶ್ವರ್​ ವಿರುದ್ಧ ಸೇಡು ತೀರಿಸಿಕೊಳ್ಳಲು ಜೆಡಿಎಸ್​​ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲೇಬೇಕಾದ ಅನಿವಾರ್ಯತೆಯಲ್ಲಿದೆ.

ಇದನ್ನೂ ಓದಿ:ಆಸ್ಪತ್ರೆ ಮುಂದೆ ಕೈಹಿಡಿದು ಎಳೆದ ಅಭಿಮಾನಿ; ಅಲ್ಲೇ ಗರಂ ಆದ ದರ್ಶನ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment