ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ
ತಾರಕಕ್ಕೇರಿದ ಚನ್ನಪಟ್ಟಣದ ಬೈ ಎಲೆಕ್ಷನ್ ಕಾವು!
ಎಂಎಲ್ಸಿ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಯಾರಿಗೆ ಟಿಕೆಟ್ ನೀಡಬೇಕು ಎಂದು ಯೋಚನೆಯಲ್ಲಿ ತೊಡಗಿವೆ. ಆಕಾಂಕ್ಷಿಗಳ ಒತ್ತಡದಿಂದ ಇಂಥ ಸನ್ನಿವೇಶವೊಂದು ನಿರ್ಮಾಣವಾಗಿದೆ. ಇದರ ಮಧ್ಯೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ.
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಬಿಟ್ಟಿಕೊಟ್ಟಿರುವುದು ಬಿಜೆಪಿಗೆ ಸಮಸ್ಯೆಯಾಗಿದೆ. ಕಾರಣ ಚನ್ನಪಟ್ಟಣದ ಟಿಕೆಟ್ ಆಕಾಂಕ್ಷಿ ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದಾರೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಕೊಟ್ಟಿದ್ದಾರೆ.
ಕಾಂಗ್ರೆಸ್ ಸೇರ್ತಾರಾ ಸಿ.ಪಿ ಯೋಗೇಶ್ವರ್?
ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಅತ್ತ ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸೋದು ಬಹುತೇಕ ಖಚಿತವಾಗಿದೆ. ಬಿಜೆಪಿ ಟಿಕೆಟ್‌ಗೆ ಸಿ.ಪಿ ಯೋಗೇಶ್ವರ್ ಪ್ರಯತ್ನಿಸಿದ್ರೂ ಈ ಕ್ಷೇತ್ರದಲ್ಲಿ ಜೆಡಿಎಸ್‌ಗೇ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಈಗ ರಾಜೀನಾಮೆ ನೀಡಿರೋ ಸಿ.ಪಿ ಯೋಗೇಶ್ವರ್ ಯಾವುದೇ ಕ್ಷಣದಲ್ಲಾದ್ರೂ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ