/newsfirstlive-kannada/media/post_attachments/wp-content/uploads/2025/05/Anil_Kumble_NEW.jpg)
ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿಯಾಗಿ ಆಯ್ಕೆಯ ವಿವಾದ ಇರುವಾಗಲೇ ಕರ್ನಾಟಕದ ಅರಣ್ಯ ಇಲಾಖೆ ಜಾಣ ನಡೆ ಇಟ್ಟಿದೆ. ಭಾರತ ತಂಡದ ಲೆಜೆಂಡರಿ ಆಟಗಾರ, ಮಾಜಿ ಕೋಚ್ ಹಾಗೂ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆ ಅವರಿಗೆ ಅರಣ್ಯ ಇಲಾಖೆ ಹೊಸ ಜವಾಬ್ದಾರಿಯನ್ನು ನೀಡಿದೆ.
ಭಾರತದ ತಂಡದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಕರ್ನಾಟಕ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅನಿಲ್ ಕುಂಬ್ಳೆ ಅವರು ಕರ್ನಾಟಕ ಸರ್ಕಾರಕ್ಕೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: RCB ಗೆಲುವಿನಲ್ಲಿ ಕಿಂಗ್ ಕೊಹ್ಲಿಯ ಮುತ್ತಿನಂತ ವರ್ಲ್ಡ್ರೆಕಾರ್ಡ್ಸ್.. ಏನೇನು ದಾಖಲೆ ಬರೆದರು ವಿರಾಟ್?
ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅರಣ್ಯ, ವನ್ಯಜೀವಿ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಇನ್ನು ಈ ಮಹತ್ತರ ಕಾರ್ಯಕ್ಕೆ, ಸಮಾಜಮುಖಿ ಉದ್ದೇಶದಿಂದ ಕುಂಬ್ಳೆ ಅವರು ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.
ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ವಿಶ್ವದ ಶ್ರೇಷ್ಠ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಹಾಗೂ ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶಿಸಲು ನಿರ್ಣಯ ಕೈಗೊಂಡಿದ್ದೇವೆ ಎಂದು ಅರಣ್ಯ ಸಚಿವರು ತಿಳಿಸಿದರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ