newsfirstkannada.com

×

WATCH: ಧರ್ಮಸ್ಥಳಕ್ಕೆ ಬಂದ ಕ್ರಿಕೆಟಿಗ K.L ರಾಹುಲ್‌ಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೊಟ್ಟ ಸ್ಪೆಷಲ್ ಗಿಫ್ಟ್ ಏನು?

Share :

Published June 25, 2023 at 2:47pm

    ಧರ್ಮಸ್ಥಳಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್ ರಾಹುಲ್

    ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ

    ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಆಶೀರ್ವಾದ

ಮಂಗಳೂರು: ಖ್ಯಾತ ಕ್ರಿಕೆಟಿಗ, ಕನ್ನಡಿಗ ಕೆ.ಎಲ್ ರಾಹುಲ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಮೊದಲಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೆ.ಎಲ್‌ ರಾಹುಲ್ ಭೇಟಿಯಾಗಿದ್ದಾರೆ.

ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಕೆ.ಎಲ್ ರಾಹುಲ್ ಅವರು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಕುಟುಂಬಸ್ಥರ ಭೇಟಿಯಾಗಿ ಚರ್ಚೆ ನಡೆಸಿದರು. ಕೆಲ ಕಾಲ ವೀರೇಂದ್ರ ಹೆಗ್ಗಡೆಯವರ ಜೊತೆಗೂ ಮಾತುಕತೆ ನಡೆಸಿದ್ದಾರೆ. ಬಳಿಕ ಧರ್ಮಾಧಿಕಾರಿ ಹೆಗ್ಗಡೆಯವರಿಂದ ಕೆ.ಎಲ್ ರಾಹುಲ್ ಆಶೀರ್ವಾದ ಪಡೆದಿದ್ದಾರೆ.

ಕ್ರಿಕೆಟಿಗ ಕೆ.ಎಲ್ ರಾಹುಲ್‌ಗೆ ಶಾಲು ಹೊದಿಸಿ ಆಶೀರ್ವದಿಸಿದ ವಿರೇಂದ್ರ ಹೆಗ್ಗಡೆಯವರು ಗೋವಿನ ಕಂಚಿನ ಪ್ರತಿಮೆಯನ್ನು ನೀಡಿದ್ದಾರೆ. ಇದರ ಜೊತೆಗೆ ಬೆಳ್ಳಿ, ನಾಣ್ಯ ನೀಡಿ ಆತ್ಮೀಯವಾಗಿ ಗೌರವಿಸಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ 

WATCH: ಧರ್ಮಸ್ಥಳಕ್ಕೆ ಬಂದ ಕ್ರಿಕೆಟಿಗ K.L ರಾಹುಲ್‌ಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೊಟ್ಟ ಸ್ಪೆಷಲ್ ಗಿಫ್ಟ್ ಏನು?

https://newsfirstlive.com/wp-content/uploads/2023/06/KL-Rahul-In-Dharmastala.jpg

Load More