ವಿಶ್ವಕಪ್ನಲ್ಲಿ ಮೊಹಮ್ಮದ್ ಶಮಿ ಅದ್ಭುತ ಸಾಧನೆ
6 ಪಂದ್ಯವನ್ನಾಡಿ 23 ವಿಕೆಟ್ ಪಡೆದಿರುವ ಶಮಿ
ಯೋಗಿ ಕನಸಿನಂತೆ 20 ಮಿನಿ ಕ್ರೀಡಾಂಗಣ ನಿರ್ಮಾಣ
ಕ್ರಿಕೆಟಿಗ ಮೊಹಮ್ಮದ್ ಶಮಿಗೆ ವಿಶೇಷ ಗೌರವ ನೀಡಲು ಸಿಎಂ ಯೋಗಿ ಆದಿತ್ಯನಾಥ ಸರ್ಕಾರ ನಿರ್ಧರಿಸಿದೆ. ಶಮಿ ಅವರ ಹುಟ್ಟೂರು ಅಮ್ರೋಹಾದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಉತ್ತರ ಪ್ರದೇಶ ಸರ್ಕಾರ ಸಜ್ಜಾಗಿದೆ.
ಒಟ್ಟು ಐದುಕೋಟಿ ಮೊತ್ತದಲ್ಲಿ ಕ್ರೀಡಾಂಗಣ ಸಿದ್ಧವಾಗಲಿದ್ದು, ಅದಕ್ಕಾಗಿ ಈಗಾಗಲೇ ಒಂದು ಹೆಕ್ಟೆರ್ ಭೂಮಿಯನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಯೋಗಿ ಆದಿತ್ಯನಾಥ್ ಕನಸಿನಂತೆ ಉತ್ತರ ಪ್ರದೇಶದ ಗ್ರಾಮೀಣ ಪ್ರದೇಶದಲ್ಲಿ ಒಟ್ಟು 20 ಕ್ರೀಡಾಂಗಣ ನಿರ್ಮಿಸಲು ನಿರ್ಧರಿಸಲಾಗಿದೆ.
ಅದರ ಅಡಿಯಲ್ಲೇ ಒಂದು ಕ್ರೀಡಾಂಗಣ ಶಮಿಯ ಹುಟ್ಟೂರಿನಲ್ಲಿ ನಿರ್ಮಾಣ ಆಗಲಿದೆ. ವಿಶೇಷ ಅಂದರೆ ಅದಕ್ಕೆ ಶಮಿ ಪೋಷಕರಿಂದ ಭೂಮಿ ಪೂಜೆ ಮಾಡಿಸಲು ಸರ್ಕಾರ ಚಿಂತಿಸಿದೆ. ಈ ಬಾರಿಯ ವಿಶ್ವಕಪ್ನಲ್ಲಿ ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸೆಮಿ ಫೈನಲ್ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಒಂದೇ ಮ್ಯಾಚ್ನಲ್ಲಿ 7 ವಿಕೆಟ್ ಪಡೆದು ಮಿಂಚಿದ್ದಾರೆ.
ವಿಶ್ವಕಪ್ನ ಮೊದಲ 4 ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಶಮಿ, ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡರು. 10 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಮಾತ್ರ ಆಡಿರುವ ಶಮಿ 23 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಈ ಬಾರಿ ವಿಶ್ವಕಪ್ನಲ್ಲಿ ಅಧಿಕ ವಿಕೆಟ್ ಪಡೆದ ಆಟಗಾರ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್