ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕೋರ್ಟ್​ ಆದೇಶ

author-image
Ganesh
Updated On
ಮಗಳು ಪ್ರಿಯಾಂಕಾ ಗೆದ್ರೂ ಭಾರೀ ಆಕ್ರೋಶ ಹೊರ ಹಾಕಿದ ಸತೀಶ್​ ಜಾರಕಿಹೊಳಿ; ಅಸಲಿ ಕಾರಣವೇನು?
Advertisment
  • ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್​ನಿಂದ ಆದೇಶ
  • ಏಪ್ರಿಲ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್
  • ಅಷ್ಟಕ್ಕೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಡಿದ ತಪ್ಪೇನು..?

ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಹಿಂಡಲಗಾ ಬೆಳಗಾವಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಸಭೆ ನಡೆಸಿದ ಆರೋಪ ಕೇಳಿಬಂದಿತ್ತು. ಚುನಾವಣಾ ಅಧಿಕಾರಿ‌ ಮಹಾಂತೇಶ್ ಖಾಸಗಿ ದೂರು ದಾಖಲಿಸಿದ್ದರು.

ಇದರ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್​ನ ಜಡ್ಜ್ ಜೆ.ಪ್ರೀತ್, ಸಚಿವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶ ನೀಡಿದ್ದಾರೆ. ಮಾತ್ರವಲ್ಲ, ಏಪ್ರಿಲ್ 30 ರಂದು ಮುಂದಿನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದ್ದು, ಅಂದು ಕೋರ್ಟ್​ ಕಲಾಪಕ್ಕೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment