/newsfirstlive-kannada/media/post_attachments/wp-content/uploads/2025/04/CSK-Dhoni-Toss-Video-2.jpg)
ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಆಘಾತಕಾರಿ ಸಿಕ್ಕಿದೆ. ಮಹೇಂದ್ರ ಸಿಂಗ್ ಧೋನಿ ಗಾಯಗೊಂಡಿದ್ದು, ಮುಂದಿನ ಪಂದ್ಯಗಳಿಗೆ ಲಭ್ಯರಾಗೋದು ಅನುಮಾನ ಮೂಡಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಧೋನಿ ಅದ್ಭುತ ಇನ್ನಿಂಗ್ಸ್ ಆಡಿದರು. ಜೊತೆಗೆ ತಂಡವನ್ನು ಗೆಲ್ಲಿಸಿಕೊಂಡು ಹೋಗುವಲ್ಲಿ ಯಶಸ್ವಿಯಾದರು. ಈ ಪಂದ್ಯದಲ್ಲಿ ಧೋನಿ ಕಾಲಿನ ಸಮಸ್ಯೆ ಎದುರಿಸುತ್ತಿರುವುದು ಕಂಡುಬಂದಿದೆ. ಪಂದ್ಯ ಮುಗಿದ ನಂತರವೂ ನೋವಿನಿಂದ ಬಳಲಿದ್ದಾರೆ. ಇದೀಗ ಆ ವಿಡಿಯೋ ಕೂಡ ವೈರಲ್ ಆಗ್ತಿದೆ.
ಇದನ್ನೂ ಓದಿ: ಸೋಲಿನ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ CSK.. ಧೋನಿ ಪ್ಲಾನ್ ಮಾತ್ರ ಭಲೇ ಇದೆ..!
ಚೆನ್ನೈ ಪರ ಧೋನಿ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದರು. 11 ಎಸೆತ ಎದುರಿಸಿ 26 ರನ್ ಚಚ್ಚಿ ಅಜೇಯರಾಗಿ ಉಳಿದರು. ಧೋನಿ ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ್ದವು. ಸಿಎಸ್‌ಕೆ ಇನ್ನಿಂಗ್ಸ್‌ನ ಕೊನೆಯ ಓವರ್‌ಗಳಲ್ಲಿ ಧೋನಿ, ನಡೆದಾಡಲು ಪರದಾಡಿದರು.
ಮುಂಬೈ ಇಂಡಿಯನ್ಸ್ ವಿರುದ್ಧ ಆಡಲ್ಲ?
ಮುಂದಿನ ಭಾನುವಾರ ಚೆನ್ನೈ ಮತ್ತು ಮುಂಬೈ ನಡುವಿನ ಪಂದ್ಯ ನಡೆಯಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಧೋನಿ ಆಡುತ್ತಾರೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರ ಆಗಿಲ್ಲ. ಧೋನಿ ಫಿಟ್ ಆದರೆ ಮಾತ್ರ ಆಡಲಿದ್ದಾರೆ. ಧೋನಿ ಫಿಟ್ನೆಸ್ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಯಾವುದೇ ಮಾಹಿತಿ ನೀಡಿಲ್ಲ. ಧೋನಿ ಫಿಟ್ ಆಗಿಲ್ಲದಿದ್ದರೆ ಮುಂಬರುವ ಪಂದ್ಯಗಳಿಂದ ಹೊರಗುಳಿಯಬಹುದು.
ಚೆನ್ನೈ ನಾಯಕ ಗಾಯಕ್ವಾಡ್ ಗಾಯದ ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ಅವರ ಸ್ಥಾನಕ್ಕೆ ಸಿಎಸ್‌ಕೆ ಆಯುಷ್ ಮ್ಹಾತ್ರೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈ ಋತುವಿನಲ್ಲಿ ಸಿಎಸ್‌ಕೆ ಸತತ ಐದು ಪಂದ್ಯಗಳಲ್ಲಿ ಸೋತಿದೆ.
ಇದನ್ನೂ ಓದಿ: ಸ್ಟಾರ್ ನಟನ ಕಿರುಕುಳ.. ಕಾಟ ಕೊಟ್ಟ ಶಾಕಿಂಗ್ ವಿಚಾರ ಬಿಚ್ಚಿಟ್ರು ಮಲಯಾಳಂ ನಟಿ; ಹೇಳಿದ್ದೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್