ಮೃತನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ
ಸಿ.ಟಿ ರವಿ ನೇತೃತ್ವದ ನಿಯೋಗ ಹತ್ಯೆಯಾದ ಸ್ಥಳಕ್ಕೆ ಭೇಟಿ
ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಂದ ಮಾಹಿತಿ
ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹತ್ಯೆಯಾದ ಹಿನ್ನೆಲೆಯಲ್ಲಿ ಸಿ.ಟಿ.ರವಿ ನೇತೃತ್ವದ ಬಿಜೆಪಿ ನಿಯೋಗ ಇಂದು ಮೃತನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ. ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಅವರಿಗೆ ಧೈರ್ಯ ಹೇಳುವಾಗ ಅವರು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಸಿಟಿ ರವಿಯವರು 5 ಲಕ್ಷ ರೂಪಾಯಿಯ ಚೆಕ್ ಅನ್ನು ಪೂರ್ಣಿಮಾ ಅವರಿಗೆ ನೀಡಿದ್ದಾರೆ.
ಇದನ್ನು ಓದಿ: ಪುನೀತ್ ರಾಜ್ ಕುಮಾರ್ ಫೋಟೋ ಬೇಡ ಎಂದಿದ್ದಕ್ಕೆ ಗಲಾಟೆ; ರಾಜಿ ಪಂಚಾಯ್ತಿ ನೆಪದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ
ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹತ್ಯೆ ನಡೆದ ಸ್ಥಳಕ್ಕೂ ಸಿ.ಟಿ.ರವಿ ನೇತೃತ್ವದ ಬಿಜೆಪಿ ನಿಯೋಗ ಭೇಟಿ ನೀಡಿದೆ. ಅಲ್ಲಿ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸಿಟಿ ರವಿ ಅವರ ಜೊತೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ್, ಶಾಸಕ ಶ್ರೀವತ್ಸ, ಎನ್.ಮಹೇಶ್ ಸೇರಿದಂತೆ ಇತರರು ಇದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ