ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ
ತಮಿಳುನಾಡಿಗೆ 2,600 ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಸೂಚನೆ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಮಹತ್ವದ ಆದೇಶ!
ಬೆಂಗಳೂರು: ತಮಿಳುನಾಡಿಗೆ ಮುಂದಿನ 20 ದಿನಗಳವರೆಗೂ ಪ್ರತಿದಿನ 2,600 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿದಿದೆ. ಈ ಮಧ್ಯೆ ನವೆಂಬರ್ 1ನೇ ತಾರೀಕಿನಿಂದ 23 ರವರೆಗೂ ತಮಿಳುನಾಡಿಗೆ ಪ್ರತಿನಿತ್ಯ 2,600 ಕ್ಯೂಸೆಕ್ಸ್ ನೀರು ಹರಿಸಿ ಎಂದು ಆದೇಶಿಸಿದೆ.
ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ!
ಇಂದು ತಮಿಳುನಾಡಿಗೆ ನೀರು ಹರಿಸುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಈ ಸಭೆಯಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ಅಧಿಕಾರಿಗಳು ಭಾಗಿಯಾಗಿದ್ದರು. ಕನ್ನಡಿಗರು ಕಾವೇರಿ ನೀರಿಗಾಗಿ ಎಷ್ಟು ಹೋರಾಟ ಮಾಡಿದ್ರೂ ಕ್ಯಾರೇ ಎನ್ನದೇ ಪ್ರಾಧಿಕಾರ ಈ ಆದೇಶ ಹೊರಡಿಸಿದ್ದು ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಿದಂತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ