newsfirstkannada.com

BREAKING: ಕರ್ನಾಟಕಕ್ಕೆ ಮತ್ತೆ ಅನ್ಯಾಯ; ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಟ್ಟಪ್ಪಣೆ

Share :

Published August 28, 2023 at 5:29pm

Update August 28, 2023 at 6:08pm

    ತಮಿಳುನಾಡಿಗೆ ನಾಳೆಯಿಂದಲೇ ಕಾವೇರಿ ನೀರು ಹರಿಸಲು ಸೂಚನೆ

    3 ಸಾವಿರ ಕ್ಯೂಸೆಕ್ ಲಿಮಿಟ್ ಮಾಡಿ ಎಂದು ವಾದಿಸಿದ ಕರ್ನಾಟಕ

    ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಕನ್ನಡಿಗರಿಗೆ ಅನ್ಯಾಯ

ನವದೆಹಲಿ: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಕನ್ನಡಿಗರಿಗೆ ಮತ್ತೆ ಅನ್ಯಾಯವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಕಾವೇರಿ ನೀರು ಹರಿಸಲು ಸೂಚನೆ ನೀಡಿದೆ. ನಾಳೆಯಿಂದಲೇ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.

ಕಾವೇರಿ ನದಿ ನೀರು ಬಿಡುಗಡೆಯ ಬಿಕ್ಕಟ್ಟಿನ ಹಿನ್ನೆಲೆ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆ ನಡೆಸಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಕರ್ನಾಟಕ ಹಾಗೂ ತಮಿಳುನಾಡಿನ ಅಧಿಕಾರಿಗಳು ಭಾಗಿಯಾಗಿದ್ದರು. ಎರಡೂ ರಾಜ್ಯದ ವಾದ ಆಲಿಸಿದ CWRC ನಾಳೆಯಿಂದಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕೈ ಕೊಟ್ಟ ಮಳೆ.. ಕುಸಿಯುತ್ತಿದೆ ಕಾವೇರಿ ನೀರಿನ ಮಟ್ಟ.. ಮುಂದೇನು ಗತಿ? 

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದ ಅಧಿಕಾರಿಗಳು ರಾಜ್ಯದ ಪರಿಸ್ಥಿತಿಯನ್ನು ವಿವರಿಸಿದರು. ಈ ವೇಳೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಲಿಮಿಟ್ ಮಾಡಿ ಎಂದು ಕೇಳಿಕೊಳ್ಳಲಾಗಿತ್ತು. 3 ಸಾವಿರ ಕ್ಯೂಸೆಕ್ ನೀರಿನ ಮನವಿಯನ್ನು ಪುರಸ್ಕರಿಸಿದ CWRC ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಿದೆ.

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವ CWRC ಆದೇಶಕ್ಕೆ ಕರ್ನಾಟಕ ಆಕ್ಷೇಪ ವ್ಯಕ್ತಪಡಿಸಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಪ್ರಶ್ನಿಸಲು ಕರ್ನಾಟಕ ನಿರ್ಧಾರ ಮಾಡಲಾಗಿದೆ. ನಾಳೆ ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಡೆಯಲಿದೆ. CWMA ಮುಂದೆ ಈ ಬಗ್ಗೆ ಪ್ರಶ್ನೆ ಮಾಡಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕರ್ನಾಟಕಕ್ಕೆ ಮತ್ತೆ ಅನ್ಯಾಯ; ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಟ್ಟಪ್ಪಣೆ

https://newsfirstlive.com/wp-content/uploads/2023/06/KRS-Dam-1.jpg

Load More