/newsfirstlive-kannada/media/post_attachments/wp-content/uploads/2023/08/DAYANANDA.jpg)
ಬೆಂಗಳೂರು: ಇತ್ತೀಚೆಗೆ ಸೈಬರ್ ಖದೀಮರು ಸಿಕ್ಕ ಸಿಕ್ಕವರನ್ನು ವಂಚಿಸುತ್ತಿದ್ದಾರೆ. ಜನರು ಎಷ್ಟೇ ಎಚ್ಚರದಿಂದ ಇದ್ದರೂ ಸೈಬರ್ ವಂಚಕರು ಬೆಂಬಿಡದೆ ಕಾಡುತ್ತಿದ್ದಾರೆ. ಸರ್ಕಾರಿ ಅಧಿಕಾರಿ ಹೆಸರಿನಲ್ಲಿ ಜನ ಸಾಮಾನ್ಯರಿಗೆ ಯಾಮಾರಿಸುವ ಸುದ್ದಿಯನ್ನು ನಾವೆಲ್ಲರೂ ಕೇಳಿರುತ್ತೇವೆ. ಇದೀಗ ಸೈಬರ್ ಖದೀಮರು ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ನಕಲಿ ಫೇಸ್ಬುಕ್ ಅಕೌಂಟ್ ಕ್ರಿಯೇಟ್ ಮಾಡಿದ್ದಾರೆ.
ಇದನ್ನೂ ಓದಿ: 9 ಸಾವಿರಕ್ಕೂ ಹೆಚ್ಚು ಸಹಾಯಕ ಲೋಕೋ ಪೈಲಟ್ ಹುದ್ದೆಗಳು.. SSLC ಪಾಸ್ ಆಗಿದ್ರೆ ಸಾಕು…!
ಹೌದು, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಲಾಗಿದೆ. ಆ ಮೂಲಕ ಕಮಿಷನರ್ ಹೆಸರಲ್ಲಿ ಜನಸಾಮಾನ್ಯರಿಗೂ ವಂಚಿಸಿವ ಯತ್ನ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸೈಬರ್ ಖದೀಮರು ಬಿ.ದಯಾನಂದ್ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಹಿಂದಿ ಭಾಷೆಯಲ್ಲಿ ಅಕೌಂಟ್ ಕ್ರಿಯೇಟ್ ಮಾಡಲಾಗಿದ್ದು, ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದರೆ ಹಣ ಕೇಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ