Breaking: ಬೆಳ್ಳಂಬೆಳಗ್ಗೆ ಗುಡ್​​ನ್ಯೂಸ್​.. ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ..!

author-image
Ganesh
Updated On
Breaking: ಗ್ರಾಹಕರಿಗೆ ಗುಡ್​ ನ್ಯೂಸ್.. ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ
Advertisment
  • ಪರಿಷ್ಕೃತ ದರವು ಇವತ್ತಿನಿಂದಲೇ ಜಾರಿಗೆ ಬರುತ್ತಿದೆ
  • ಸಿಲಿಂಡರ್ ಬೆಲೆ ಇಳಿಕೆಯಿಂದ ಯಾರಿಗೆಲ್ಲ ಲಾಭ..?
  • ಇವತ್ತಿನಿಂದ ಸಿಲಿಂಡರ್ ಬೆಲೆಯಲ್ಲಿ ಎಷ್ಟು ರೂಪಾಯಿ ಇಳಿಕೆ ಆಗಿದೆ?

ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಾಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ 30 ರಿಂದ 31 ರೂಪಾಯಿಗೆ ಇಳಿಕೆಯಾಗಿದ್ದು, ಅದು ಇಂದಿನಿಂದಲೇ ಜಾರಿಗೆ ಬಂದಿದೆ. ರೆಸ್ಟೋರೆಂಟ್ ಮಾಲೀಕರು ಮತ್ತು ಹೋಟೆಲ್ ಮಾಲೀಕರು ಇದರ ಲಾಭ ಪಡೆಯುತ್ತಿದ್ದಾರೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಎಲ್ಲಿ ಎಷ್ಟಾಗಿದೆ..?
ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 30 ರೂಪಾಯಿ ಕಡಿಮೆ ಆಗಿದೆ. ಜೂನ್‌ನಲ್ಲಿ ಅದರ ಬೆಲೆಯು 1676 ರೂಪಾಯಿ ಇತ್ತು. ಇದೀಗ 1646 ರೂಪಾಯಿಗೆ ಇಳಿಕೆ ಆಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ 31 ರೂ.ಗಳಷ್ಟು ಕಡಿಮೆಯಾಗಿದೆ. ಜೂನ್‌ನಲ್ಲಿ ಇಲ್ಲಿ 1787 ರೂಪಾಯಿ ಇತ್ತು ಇದೀಗ 1756 ರೂಪಾಯಿ ಆಗಿದೆ.

ಇದನ್ನೂ ಓದಿ:3 ಹೊಸ ಕ್ರಿಮಿನಲ್ ಕಾನೂನು ಜಾರಿ.. ಇವು ನ್ಯಾಯ ವ್ಯವಸ್ಥೆ, ನಾಗರಿಕರ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ..?

ಮುಂಬೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 31 ರೂಗಳಷ್ಟು ಕಡಿಮೆಯಾಗಿದೆ. ಜೂನ್‌ನಲ್ಲಿ ಅದರ ಬೆಲೆ 1629 ರೂಪಾಯಿ ಇತ್ತು ಇದೀಗ 1598 ರೂಪಾಯಿ ಆಗಿದೆ. ಚೆನ್ನೈನಲ್ಲಿ 30 ರೂಪಾಯಿ ಇಳಿಕೆಯಾಗಿದ್ದು, 1809.50 ರೂಪಾಯಿ ಇಂದ 1840.50 ರೂಪಾಯಿಗೆ ಇಳಿಕೆಯಾಗಿದೆ. ಈ ಬಾರಿಯೂ ಕೂಡ ಗೃಹಬಳಕೆಯ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗದಿರೋದು ಸಾಮಾನ್ಯ ಜನರಿಗೆ ನಿರಾಸೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment