/newsfirstlive-kannada/media/post_attachments/wp-content/uploads/2025/03/Dk-shivakumar-Siddaramaiah-modi.jpg)
ನವದೆಹಲಿ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡೋದು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬಹಳ ದೊಡ್ಡ ಕನಸು. ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಡಿಕೆಶಿ ಮಹದಾಸೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಜಿಲ್ಲೆಯ ಹೆಸರು ಬದಲಾವಣೆಯ ಪ್ರಸ್ತಾವವನ್ನೇ ತಿರಸ್ಕರಿಸಲಾಗಿದೆ.
ಈ ಹಿಂದೆ ಕರ್ನಾಟಕ ಸರ್ಕಾರ ಬಿಜಾಪುರ ಜಿಲ್ಲೆಯ ಹೆಸರನ್ನು ವಿಜಯಪುರ, ಗುಲ್ಬರ್ಗಾ ಜಿಲ್ಲೆಯ ಹೆಸರು ಅನ್ನು ಕಲ್ಬುರ್ಗಿ ಎಂದು ಬದಲಾಯಿಸಲು ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರದ ಗೃಹ ಇಲಾಖೆಯಿಂದ ಜಿಲ್ಲೆ, ನಗರಗಳ ಹೆಸರು ಬದಲಾವಣೆಗೆ ಒಪ್ಪಿಗೆ ಸಿಕ್ಕಿತ್ತು.
/newsfirstlive-kannada/media/post_attachments/wp-content/uploads/2025/03/Dk-shivakumar-modi.jpg)
ಇದೀಗ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲು ರಾಜ್ಯದ ಕ್ಯಾಬಿನೆಟ್‌ನಲ್ಲಿ ತೀರ್ಮಾನ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳಿಸಲಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮ ತವರು ಜಿಲ್ಲೆಯ ಹೆಸರು ಬದಲಾವಣೆಗೆ ನಿರ್ಧರಿಸಿದ್ದರು. ಆದರೆ ರಾಜ್ಯ ಸರ್ಕಾರದ ಈ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಲು ಹಿಂದೇಟು ಹಾಕಿದೆ.
ಕೆಲ ಕಾಲ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯ ಪ್ರಸ್ತಾವವನ್ನು ಮುಂದುವರಿಸಬೇಡಿ ಎಂದಿರುವ ಕೇಂದ್ರ ಸರ್ಕಾರ ತನ್ನ ಈ ನಿರ್ಧಾರಕ್ಕೆ ಯಾವುದೇ ನಿರ್ದಿಷ್ಟ ಕಾರಣವನ್ನು ಕೊಟ್ಟಿಲ್ಲ. ಡಿ.ಕೆ ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ.
ಡಿ.ಕೆ ಶಿವಕುಮಾರ್ ಕನಸಿನ ಜಿಲ್ಲೆ!
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಿದರೆ ಜಮೀನು, ಆಸ್ತಿಗಳ ಬೆಲೆ ಹೆಚ್ಚಾಗುತ್ತೆ. ತಮ್ಮ ಜಿಲ್ಲೆಗೂ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಸಿಗುತ್ತೆ ಅನ್ನೋದು ಡಿ.ಕೆ ಶಿವಕುಮಾರ್ ಅವರ ಲೆಕ್ಕಾಚಾರ ಆಗಿತ್ತು.
/newsfirstlive-kannada/media/post_attachments/wp-content/uploads/2024/07/SIDDU_HDK_RAMANAGAR.jpg)
ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಕಾರಣದಿಂದ ರಾಮನಗರ ಜಿಲ್ಲೆಗೂ ಕೈಗಾರಿಕೆ, ಬಂಡವಾಳ ಹೂಡಿಕೆ ಹರಿದು ಬರುತ್ತೆ ಅನ್ನೋ ನಂಬಿಕೆ ಇತ್ತು. ಆದರೆ ಡಿಕೆಶಿ ಲೆಕ್ಕಾಚಾರದಂತೆ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಲ್ಲ.
ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರಕ್ಕೆ ನಾನೇ ಟಾರ್ಗೆಟ್.. ತೋಟದ ಮನೆ ಒತ್ತುವರಿ ತೆರವಿಗೆ HDK ಖಡಕ್ ರಿಯಾಕ್ಷನ್!
ರಾಜ್ಯ ಸರ್ಕಾರಕ್ಕೆ ಅಧಿಕಾರ ಇದ್ಯಾ?
ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ರೆಡ್ ಸಿಗ್ನಲ್ ತೋರಿಸಿದೆ. ಆದರೆ ಜಿಲ್ಲೆಯ ಹೆಸರು ಬದಲಾವಣೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಿಲ್ಲ ಎಂದಿರುವ ಕಂದಾಯ ಸಚಿವರು ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us