newsfirstkannada.com

ಆರಂಭದಿಂದಲೂ ಭರ್ಜರಿ ಲೀಡ್.. ಡಾ.C.N ಮಂಜುನಾಥ್ ಗೆಲುವಿನ ವೇಗಕ್ಕೆ ಕಂಗಾಲಾದ ಡಿ.ಕೆ ಸುರೇಶ್

Share :

Published June 4, 2024 at 11:45am

    ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆಲುವಿನತ್ತ ದಾಪುಗಾಲು

    ಡಾಕ್ಟರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್

    ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ಗೆ ಮುನ್ನಡೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮತಎಣಿಕೆಯ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮತಗಳ ಅಂತರದಲ್ಲಿ ಮುನ್ನುಗ್ಗುತ್ತಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷ 24 ಸಾವಿರದ 943 ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್‌ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: ಎದುರಾಳಿಗಳಿಗೆ ಫುಲ್ ಶಾಕ್ ಕೊಟ್ಟ ರಾಹುಲ್ ಗಾಂಧಿ.. ವಯನಾಡು, ರಾಯ್​ಬರೇಲಿಯ ಕೌಂಟಿಂಗ್ ಏನ್ ಹೇಳುತ್ತೆ? 

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ಗೆಲುವು ಬಹುತೇಕ ಪಕ್ಕಾ ಎನ್ನಲಾಗಿದೆ. ಡಾ.ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ.

ಪ್ರತಿ ಸುತ್ತಿನಲ್ಲೂ ಅಂತರ ಹೆಚ್ಚಿಸಿಕೊಂಡ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ತಮ್ಮ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕನಕಪುರ ಹೊರತುಪಡಿಸಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ 7 ವಿಧಾನಸಭಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಿನ್ನೆಡೆಯ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಕಂಗಾಲಾಗಿದ್ದಾರೆ. ಕಾಂಗ್ರೆಸ್‌ ಮುಖಂಡರ ಜೊತೆ ಡಿ.ಕೆ ಸುರೇಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಚರ್ಚಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆರಂಭದಿಂದಲೂ ಭರ್ಜರಿ ಲೀಡ್.. ಡಾ.C.N ಮಂಜುನಾಥ್ ಗೆಲುವಿನ ವೇಗಕ್ಕೆ ಕಂಗಾಲಾದ ಡಿ.ಕೆ ಸುರೇಶ್

https://newsfirstlive.com/wp-content/uploads/2024/06/Dr-Cn-Manjunath.jpg

Load More