Advertisment

ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕೇಸ್ ದಾಖಲಿಸಿದ ಡಿ.ರೂಪಾ; IAS ಅಧಿಕಾರಿಗೆ ನೋಟಿಸ್‌!

author-image
admin
Updated On
ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕೇಸ್ ದಾಖಲಿಸಿದ ಡಿ.ರೂಪಾ; IAS ಅಧಿಕಾರಿಗೆ ನೋಟಿಸ್‌!
Advertisment
  • ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕೇಸ್ ದಾಖಲಿಸಿದ ಡಿ. ರೂಪಾ
  • ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆ
  • ಈಗ ಇಬ್ಬರು ಪರಸ್ಪರರ ವಿರುದ್ಧ ಮಾನನಷ್ಟ ಕೇಸ್ ದಾಖಲು

IAS ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ IPS ಅಧಿಕಾರಿ ಡಿ. ರೂಪಾ ಅವರ ಕಾನೂನು ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಡಿ. ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಲಾಗಿದೆ.

Advertisment

2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ ಎಂದು IPS ಅಧಿಕಾರಿ ಡಿ. ರೂಪಾ ಆರೋಪಿಸಿದ್ದಾರೆ.

publive-image

ರೋಹಿಣಿ ಸಿಂಧೂರಿ ಅವರ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ಈ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆ ಆಗಿದ್ದು, 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ರೋಹಿಣಿ ಸಿಂಧೂರಿ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆ ಆಗಿದೆ. ಹೀಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸುವಂತೆ ರೂಪಾ ಅವರು ಅರ್ಜಿ ಸಲ್ಲಿಸಿದ್ದಾರೆ.

ಡಿ. ರೂಪಾ ಮೌದ್ಗಿಲ್ ಅವರ ಅರ್ಜಿ ಕೈಗೆತ್ತಿಕೊಂಡಿರುವ ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ ಮಾಡಿದೆ.

Advertisment

ಇದನ್ನೂ ಓದಿ: ಸರ್ಜರಿ ಇಲ್ಲದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್‌; BGS ವೈದ್ಯರು ಹೇಳಿದ್ದೇನು? 

ಈ ಪ್ರಕರಣ ಹಿನ್ನೆಲೆ ಏನು?
IPS ಅಧಿಕಾರಿ ಡಿ.ರೂಪಾ ಅವರು ಇದ್ದಕ್ಕಿದ್ದಂತೆ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದೇಕೆ ಅನ್ನೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ವರ್ಷದ ಹಿಂದೆ ಕೊಟ್ಟ ಹೇಳಿಕೆಗೆ ಈಗ ಮಾನನಷ್ಟ ಕೇಸ್ ದಾಖಲಿಸಲು ಅಸಲಿ ಕಾರಣವೇನು ಅನ್ನೋದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಒಂದು ವರ್ಷದ ಹಿಂದೆಯೇ ಡಿ.ರೂಪಾ ಹೇಳಿಕೆಯಿಂದ ಮಾನನಷ್ಟ ಆಗಿದೆ ಎಂದು ರೋಹಿಣಿ ಸಿಂಧೂರಿ ಅವರು ಕೇಸ್ ದಾಖಲಿಸಿದ್ದರು. ಈ ಕೇಸ್ ರದ್ದುಪಡಿಸಲು ಕೋರಿ ಡಿ.ರೂಪಾ ಹೈಕೋರ್ಟ್, ಸುಪ್ರೀಂಕೋರ್ಟ್ ಮೆಟ್ಚಿಲೇರಿದ್ದರು. ಹೈಕೋರ್ಟ್ ಈ ಕೇಸ್ ರದ್ದುಪಡಿಸಲು ನಿರಾಕರಿಸಿತ್ತು. ಬಳಿಕ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Advertisment

publive-image

ಇಬ್ಬರು ಅಧಿಕಾರಿಗಳು ರಾಜೀ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಲಾಯರ್ ಕಚೇರಿ, ಸುಪ್ರೀಂಕೋರ್ಟ್‌ನಲ್ಲಿ ಕಾಲ ಕಳೆಯುವ ಬದಲು ರಾಜಿ ಮಾಡಿಕೊಳ್ಳಿ ಎನ್ನಲಾಗಿತ್ತು. ಆದರೆ ಮಧ್ಯಸ್ಥಿಕೆ ಕೇಂದ್ರಕ್ಕೆ ಕೇಸ್ ವಹಿಸಿದರೂ ರಾಜೀ ಮಾಡಿಕೊಳ್ಳಲು ಇಬ್ಬರು ಸುಪ್ರೀಂಕೋರ್ಟ್‌ನಲ್ಲಿ ಒಪ್ಪಲಿಲ್ಲ.

ಈ ಬೆಳವಣಿಗೆ ಬಳಿಕ ಈಗ ದಿಢೀರನೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಅವರು ಮಾನನಷ್ಟ ಕೇಸ್ ದಾಖಲಿಸಿದ್ದಾರೆ. ಈಗ ಇಬ್ಬರು ಪರಸ್ಪರರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದಂತಾಗಿದೆ. ಈಗ ರೋಹಿಣಿ ಸಿಂಧೂರಿ ಅವರು ಏನ್ ಮಾಡ್ತಾರೆ ಅನ್ನೋ ಕುತೂಹಲ ಹೆಚ್ಚಾಗಿದೆ. ಬೆಂಗಳೂರಿನ ಕೆಳ ನ್ಯಾಯಾಲಯದಲ್ಲಿ ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಕೇಸ್ ಮುಂದುವರಿಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment