ಡಾಲಿ ಧನಂಜಯ್ಗೆ ಇಂದು ಹುಟ್ಟು ಹಬ್ಬದ ಸಂಭ್ರಮ
37ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುತ್ತಿರುವ ನಟ
ಚಂದ್ರಯಾನ 3 ಸಕ್ಸಸ್ ಆಗುತ್ತೆ ಎಂದು ಡಾಲಿ ಶುಭ ಹಾರೈಕೆ
ಸ್ಯಾಂಡಲ್ವುಡ್ನ ನೆಚ್ಚಿನ ನಟ ಡಾಲಿ ಧನಂಜಯ್ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. 37ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಂತು ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಭರಪೂರ ಶುಭಶಯ ಕೋರಿದ್ದಾರೆ. ಜೊತೆಗೆ ನಟನನನ್ನು ಭೇಟಿಯಾಗಿ ಕೇಕ್ ಕತ್ತರಿಸುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ಹುಟ್ಟುಹಬ್ಬದ ಪ್ರಯುಕ್ತ ಮಾತನಾಡಿದ ಡಾಲಿ, ನನ್ನ ಹುಟ್ಟುಹಬ್ಬದ ದಿನವೇ ಚಂದಿರನ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗ್ತಿರೋದು ತುಂಬಾ ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ವಿಜ್ಞಾನಿಗಳ ಎಲ್ಲ ಪರಿಶ್ರಮ ಸಾರ್ಥಕವಾಗುವ ಗಳಿಗೆ ಇದು. ನಮ್ಮ ಇಸ್ರೋ ವಿಜ್ಞಾನಿಗಳು ತುಂಬಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಅವರಿಗೆ ಧನ್ಯವಾದ. ಇನ್ನೂ ಇಂತಹ ಅನೇಕ ಕೆಲಸಗಳು ಅವರಿಂದ ಆಗಲಿ. ಜಗತ್ತಿನಲ್ಲಿ ಎಲ್ಲವೂ ಒಂದೇ ಬಾರಿಗೆ ಸಕ್ಸಸ್ ಆಗಲ್ಲ. ಕೆಲವೊಮ್ಮೆ ವಿಫಲವಾಗುತ್ತೆ. ಹಾಗೆಯೇ ನಮ್ಮ ಇಸ್ರೋ ಚಂದ್ರಯಾನ 3 ಸಕ್ಸಸ್ ಆಗುತ್ತೆ ಎಂದು ಡಾಲಿ ಶುಭ ಹಾರೈಸಿದ್ದಾರೆ.
ಅಣ್ಣ From Mexico
ಧನು ಜನ್ಮದಿನದ ಅಂಗವಾಗಿ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ motion ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ‘ಅಣ್ಣ From Mexico’ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.
2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, suite ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ.
‘ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ. ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು,. ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಇದಲ್ಲದೆ ಡಾಲಿ ಧನಂಜಯ್ ತಮಿಳಿನಲ್ಲಿ ಪಾಯುಮ್ ಒಲಿ ನೀ ಎನಕ್ಕು, ತೆಲುಗಿನಲ್ಲಿ ಮನು ಚರಿತ, ಝೆಬ್ರಾ ಮತ್ತು ಅಲ್ಲು ಅರ್ಜುನ್ ಜೊತೆಗೆ ಪುಷ್ಪ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನು ಕನ್ನಡದಲ್ಲಿ ಉತ್ತರಖಂಡ ಸಿನಿಮಾದಲ್ಲಿ ಡಾಲಿ ಬಣ್ಣ ಹಚ್ಚಿದ್ದಾರೆ. ಅಂದಹಾಗೆಯೇ ಈ ಸಿನಿಮಾಗಳು ಒಂದೊಂದಾಗಿ ತೆರೆ ಮೇಲೆ ಬರಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ