newsfirstkannada.com

ಇಂದಿನಿಂದ ಮತ್ತೆ ಡಾಲಿ ಅಬ್ಬರ.. ಕೋಟಿ ಸಿನಿಮಾ ರಿಲೀಸ್..​ ಫ್ಯಾನ್ಸ್​​ಗೆ ಹಬ್ಬ!

Share :

Published June 14, 2024 at 7:38am

  ಬಿಗ್​ಬಾಸ್​ ಖ್ಯಾತಿಯ ವಾಸುಕಿ ವೈಭವ್‌ ರಾಗ ಸಂಯೋಜನೆಯಲ್ಲಿ ಮೂಡಿ ಬಂದ ಹಾಡು

  ಸ್ಯಾಂಡಲ್​​ವುಡ್​​ ನಟ ಡಾಲಿ ಧನಂಜಯ್ ನಟನೆಯ ಕೋಟಿ ಸಿನಿಮಾ ಇಂದು ರಿಲೀಸ್

  200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡಾಲಿ ಧನಂಜಯ್ ನಟನೆಯ ಕೋಟಿ ಸಿನಿಮಾ ಬಿಡುಗಡೆ

ಸ್ಯಾಂಡಲ್​​ವುಡ್​​ ನಟ ಡಾಲಿ ಧನಂಜಯ್ ಅಭಿನಯದ ಬಹುನೀರಿಕ್ಷಿತ ಸಿನಿಮಾ ಕೋಟಿ. ಈಗಾಗಲೇ ಟ್ರೇಲರ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಸದ್ದು ಮಾಡಿದ್ದ ಕೋಟಿ ಇಂದು ರಿಲೀಸ್​ ಆಗುತ್ತಿದೆ. ಇನ್ನು ನೆಚ್ಚಿನ ನಟನ ಸಿನಿಮಾವನ್ನು ನೋಡಲು ಅಭಿಮಾನಿಗಳು ಅಡ್ವಾನ್ಸ್ ಟಿಕೆಟ್ ಬುಕಿಂಗ್ ಮಾಡಿ ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕ್ರೂರ ಕೊಲೆ‌ ಕೇಸ್‌ಗೆ ಮೇಜರ್ ಟ್ವಿಸ್ಟ್.. ತನಿಖಾಧಿಕಾರಿ ದಿಢೀರ್ ಬದಲಾವಣೆ; ಯಾಕೆ?

ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲೆಸಿದ್ದ ಇವರು ಈಗ ನಿರ್ದೇಶನದ ಟೋಪಿ ತೊಟ್ಟಿದ್ದಾರೆ. ‘ಕೋಟಿ’ ತಂಡ ಬಹುಸಕ್ರಿಯವಾಗಿ ಸಿನಿಮಾ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಬಸ್ಸು, ಮೆಟ್ರೋ, ಟೀವಿ, ಯೂಟ್ಯೂಬ್, ಇನ್ಟಾಗ್ರಾಮ್ ಎಲ್ಲೆಡೆಯೂ ಕೋಟಿ ಸುದ್ದಿ ಮಾಡ್ತಾ ಇದೆ.

ಇತ್ತೀಚೆಗೆಷ್ಟೇ ಕೋಟಿ ಸಿನಿಮಾದ ಪ್ರೀ ರಿಲೀಸ್ ಅದ್ಧೂರಿಯಾಗಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ತಂಡಕ್ಕೆ ಶುಭ ಹಾರೈಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೆಟ್​ ನೀಡಿತು. ಇನ್ನು ಹತ್ತಾರು ವರ್ಷ ಟೀವಿ, ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿರುವ ಪರಮ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೋಟಿ ಸಿನಿಮಾ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.

ಇನ್ನು, ಈ ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದಿನಿಂದ ಮತ್ತೆ ಡಾಲಿ ಅಬ್ಬರ.. ಕೋಟಿ ಸಿನಿಮಾ ರಿಲೀಸ್..​ ಫ್ಯಾನ್ಸ್​​ಗೆ ಹಬ್ಬ!

https://newsfirstlive.com/wp-content/uploads/2024/06/daali-dhananjay.jpg

Load More