ಭಯಾನಕ ಕೊಲೆ, ಬೆಚ್ಚಿಬಿದ್ದ ಶಿಡ್ಲಘಟ್ಟ ಮಂದಿ
ಕಾಂಗ್ರೆಸ್ ಜೊತೆಯೂ ಗುರುತಿಸಿಕೊಂಡಿದ್ದರು
ಎಸ್ಪಿ ನಾಗೇಶ್ ಭೇಟಿ, ದಿಬ್ಬೂರಹಳ್ಳಿ ಠಾಣೆಯಲ್ಲಿ ಕೇಸ್
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡನ ಬರ್ಬರ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಾರಾಯಣಸ್ವಾಮಿ (ಕರಿಯಪ್ಪ) 50 ಕೊಲೆಯಾದ ಡಿಎಸ್ಎಸ್ ನಾಯಕ.
ಶಿಡ್ಲಘಟ್ಟ ತಾಲ್ಲೂಕಿನ ಬೈರಗಾನಹಳ್ಳಿ ನಿವಾಸಿಯಾಗಿದ್ದ ನಾರಾಯಣಸ್ವಾಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ದ್ಯಾವಪ್ಪಗುಡಿ-ಬೈರಗಾನಹಳ್ಳಿ ಮಾರ್ಗ ಮಧ್ಯೆ ನಿನ್ನೆ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಹತ್ಯೆ ಮಾಡಿದ್ದಾರೆ.
ರಾತ್ರಿ ಓಮ್ನಿ ಕಾರಿನಲ್ಲಿ ಕೂತಿದ್ದಾಗ ಎಂಟ್ರಿಯಾದ ದುಷ್ಕರ್ಮಿಗಳು ಕಣ್ಣಿಗೆ ಕಾರದಪುಡಿ ಎರಚಿ ಲಾಂಗು ಮಚ್ಚುಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಹಾಗು ಚಿಕ್ಕಬಳ್ಳಾಪುರ ಎಸ್ಪಿ ಡಿಎಲ್ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾಯಣಸ್ವಾಮಿ, ದಲಿತ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಗ್ರಾಮ ಪಂಚಾಯ್ತಿ ಸದಸ್ಯರಾಗಿಯೂ ಕೆಲಸ ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ