ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರಾ ಗೌಡ
ನಮ್ಮಿಬ್ಬರ ರಿಲೇಶನ್ಶಿಪ್ಗೆ 10 ವರ್ಷ ಎಂದ ‘ಪ್ರೀತಿ ಕಿತಾಬು’ ನಟಿ
ವಿಜಯಲಕ್ಷ್ಮೀ ಪೋಸ್ಟ್ ನೋಡಿ ಬೆಂಬಲಕ್ಕೆ ನಿಂತ ದರ್ಶನ್ ಫ್ಯಾನ್ಸ್
‘ನಮ್ಮಿಬ್ಬರ ರಿಲೇಶನ್ಶಿಪ್ಗೆ 10 ವರ್ಷ’ ಎಂದು ಡಿ ಬಾಸ್ ದರ್ಶನ್ ಜೊತೆಗಿನ ಫೋಟೋವನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪವಿತ್ರಾ ಗೌಡ ಹಂಚಿಕೊಂಡ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅಸಮಾಧಾನ ಹೊರಹಾಕಿದ್ದಲ್ಲದೆ, ಆಕ್ರೋಶ ಹೊರಹಾಕಿದ್ದಾರೆ. ಇದೀಗ ಅವರ ಬೆನ್ನಿಗೆ ದರ್ಶನ್ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ವಿಜಯಲಕ್ಷ್ಮೀಯವರು ಪವಿತ್ರ ಗೌಡ ಮತ್ತು ಆಕೆಯ ಪತಿ ಸಂಜಯ್ ಸಿಂಗ್ ಜೊತೆಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಎಚ್ಚರಿಸಿದ್ದಾರೆ. ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. ಆದರೆ ಈ ಪೋಸ್ಟ್ ಅನ್ನು ಕಂಡ ಡಿ ಬಾಸ್ ಫ್ಯಾನ್ಸ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಬೆನ್ನಿಗೆ ನಿಂತಿದ್ದಾರೆ. ಮಾತ್ರವಲ್ಲದೆ ‘ನಿಮ್ಮ ಜೊತೆಗೆ ನಾವಿದ್ದೇವೆ ವಿಜಿ ಅತ್ತಿಗೆ’ ಎಂದು ಕಾಮೆಂಟ್ ಹಾಕಿದ್ದಾರೆ.
View this post on Instagram
ವಿಜಯಲಕ್ಷ್ಮೀಯವರು ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ‘ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಅದು ಅವಳ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ, ಪುರುಷ ವಿವಾಹಿತನೆಂದು ತಿಳಿದುಕೊಂಡು ಆಕೆ ತನ್ನ ವೈಯಕ್ತಿಕ ಅಗತ್ಯಗಳು ಮತ್ತು ಕಾರ್ಯಸೂಚಿಗಾಗಿ ಬಂದು ಉಳಿಯಲು ಆಯ್ಕೆ ಮಾಡಿಕೊಳ್ಳುತ್ತಾಳೆ. ಈ ಚಿತ್ರಗಳಲ್ಲಿ ಪವಿತ್ರಾ ಗೌಡ ಮತ್ತು ಸಂಜಯ್ ಸಿಂಗ್ ಅವರ ಮಗಳು ಕುಶಿ ಗೌಡ ಎಂಬುದು ಸ್ಪಷ್ಟವಾಗಿ ಕಾಣಿಸುತ್ತದೆ. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ಬಳಸಿಕೊಳ್ಳುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಪವಿತ್ರಾ ಗೌಡಗೆ ಟ್ಯಾಗ್ ಮಾಡಿದ್ದಾರೆ.
ಇದನ್ನು ಕಂಡ ದರ್ಶನ್ ಫ್ಯಾನ್ಸ್ ವಿಜಯಲಕ್ಷ್ಮೀ ಅವರಿಗೆ ಬೆಂಬಲ ಸೂಚಿಸಿದ್ದು, ಬಗೆ ಬಗೆಯ ಕಾಮೆಂಟ್ ಮಾಡಿದ್ದಾರೆ. ಅದರಲ್ಲೊಬ್ಬ ‘ಅತ್ತಿಗೆಯಮ್ಮ ನೀಬು ಏನು ತಲೆ ಕೆಡಿಸಿಕೊಳ್ಳಬೇಡಿ, ನೀವು ಒಂದೇ ಒಂದು ಮಾತು ಹೇಳಿ, ಇನ್ನೊಂದು ಸಲ ಬಾಸ್ ಬಗ್ಗೆ ಪೋಸ್ಟ್ ಹಾಕಬಾರದು ಹಂಗೆ ರಬ್ತೀವಿ ಎಂದು ಬರೆದುಕೊಂಡಿದ್ದಾನೆ. ಮತ್ತೋರ್ವ, ಸೂಪರ್, ಆ ಲೇಡಿ ಚಪ್ಪಲಿ ಏಟು ಕೊಟ್ರಿ ಎಂದು ಬರೆದಿದ್ದಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ