Advertisment

ಮುಕ್ತಾಯದ ಹಂತಕ್ಕೆ ಬಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ.. ದರ್ಶನ್ ಮತ್ತು ಗ್ಯಾಂಗ್ ಜೈಲು ಸೇರುವ ಸಾಧ್ಯತೆ

author-image
AS Harshith
Updated On
ದರ್ಶನ್​​ಗೆ ಮತ್ತಷ್ಟು ಸಂಕಷ್ಟ.. ಪೊಲೀಸರಿಗೆ ಸಿಗ್ತಿದೆ ಬಲವಾದ ಸಾಕ್ಷಿಗಳು..!
Advertisment
  • ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ
  • ಆರೋಪಿಗಳಿಂದ ಸ್ವಇಚ್ಚಾ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
  • ನಾಳೆ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ದರ್ಶನ್​ ಆ್ಯಂಡ್​ ಟೀಂ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ದರ್ಶನ್ ಮತ್ತು  ಗ್ಯಾಂಗ್ ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಪೊಲೀಸರು ಈ ಹತ್ಯೆ ಕೇಸ್​ಗೆ ಸಂಬಂಧಿಸಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ಸ್ವಇಚ್ಚಾ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Advertisment

ಇದನ್ನೂ ಓದಿ: ಸಿನಿಮಾ ಕಂಪ್ಲೀಟ್ ಮಾಡದಿದ್ರೆ, ಭೂಮಿ ಮೇಲೆ ಇಲ್ಲದಂತೆ ಮಾಡಿಸ್ತೀನಿ.. ನಿರ್ಮಾಪಕನಿಗೆ ದರ್ಶನ್​ ಜೀವ ಬೆದರಿಕೆ

ಕೊಲೆ ನಡೆದ ಸ್ಥಳ, ಮೃತದೇಹ ಪತ್ರೆಯಾದ ಸ್ಥಳದಲ್ಲಿ ಮಹಜರು ಪೂರ್ಣಗೊಂಡಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸಾಂಧರ್ಬಿಕ ಸಾಕ್ಷ್ಯಗಳ ಸಂಗ್ರಹ ಮಾಡಲಾಗಿದೆ. ತನಿಖೆ ಬೇಕಾದ ಎಲ್ಲಾ ಅಗತ್ಯ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

publive-image

ಇದನ್ನೂ ಓದಿ: ದರ್ಶನ್​ ವಿಚಾರಣೆಗಾಗಿ ಪೊಲೀಸ್​ ಠಾಣೆಗೆ ಶಾಮಿಯಾನ ಅಳವಡಿಕೆ.. HDK, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೀಗಂದ್ರಾ!

Advertisment

ಬಹುತೇಕ ಕೊಲೆ ಪ್ರಕರಣ ತನಿಖೆಯನ್ನು ಪೊಲೀಸರು ಅಂತಿಮ ಹಂತಕ್ಕೆ ತಂದಿದ್ದಾರೆ. ಭಾನುವಾರು ಬಂಧಿತ ಆರೋಪಿಗಳನ್ನ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹೀಗಾಗಿ ಬಹುತೇಕ ಭಾನುವಾರ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment