ದರ್ಶನ್ ಮತ್ತು ಗ್ಯಾಂಗ್ಗೆ ಶುರುವಾಯ್ತು ಭೀತಿ
17 ಆರೋಪಿಗಳ ವಿರುದ್ಧ ಕೇಸ್.. ಇಂದು ಚಾರ್ಜ್ಶೀಟ್ ಸಲ್ಲಿಕೆ
ತನಿಖೆಯ ಮೂಲಕ ಏನೆಲ್ಲಾ ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ?
ದರ್ಶನ್ ಮತ್ತು ಗ್ಯಾಂಗ್ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣದ ಚಾರ್ಜ್ಶೀಟನ್ನು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳುಳ್ಳ ಜಾರ್ಜ್ಶೀಟನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಒಪ್ಪಿಸಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಕೊಲೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸೇರಿ ಸುಮಾರು 17 ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಇದೀಗ ಈ ಪ್ರಕರಣದ ಕುರಿತು ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಇಂದು 24ನೇ ಎ.ಸಿ.ಎಂ.ಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ.
ಇದನ್ನೂ ಓದಿ: ದುಬಾರಿಯಾದ ಚಾರ್ಜ್ಶೀಟ್! ಪೊಲೀಸ್ ಇಲಾಖೆಗೆ ದರ್ಶನ್ ತನಿಖೆಗೆ ಎಷ್ಟು ಲಕ್ಷ ಖರ್ಚು ಮಾಡಿದೆ ಗೊತ್ತಾ?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳು ಸಂಗ್ರಹಿಸಿದ್ದಾರೆ. ಇದೀಗ 17 ಆರೋಪಿತರ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ: ಜೈಲಲ್ಲಿರುವ ಮಗನಿಗೆ ಗಾಂಜಾ ತಂದ ತಾಯಿ! ಜೈಲಾಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಅರೆಸ್ಟ್
ಇನ್ನು ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ಒಳಗೊಂಡಿರುವ ಚಾರ್ಜ್ಶೀಟನ್ನು ಪೊಲೀಸರು ಸಲ್ಲಿಸಿದ್ದಾರೆ.
ದರ್ಶನ್ ಮತ್ತು ಗ್ಯಾಂಗ್ನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತನಿಖೆಯನ್ನು ಬೆಂಗಳೂರು ಪೊಲೀಸ್ ಆಯುಕ್ತರು ಬಿ.ದಯಾನಂದ, ಅಪರ ಪೊಲೀಸ್ ಆಯುಕ್ತರು ಪಶ್ಚಿಮ ವಲಯ ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಗಿರೀಶ್.ಎಸ್. ಐ.ಪಿ.ಎಸ್ ರವರ ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದನ್‌ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ