/newsfirstlive-kannada/media/post_attachments/wp-content/uploads/2024/06/darshan22.jpg)
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ಜೈಲು ಸೇರಿದೆ. ಆದರೆ ಈ ಪ್ರಕರಣದಲ್ಲಿ ಭಾಗಿಯಾದ ಕೆಲ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್​ ಮಾಡುವಂತೆ ವಿಶೇಷ ಅಭಿಯೋಜಕ (ಎಸ್​​ಪಿಪಿ) ಪ್ರಸನ್ನ ಕುಮಾರ್ ಅವರು ಕೋರ್ಟ್​​ಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಸಲಿಂಗ ಲೈಂಗಿಕ ಕೇಸ್​.. ನಿಗೂಢ ಸ್ಥಳದಲ್ಲಿ ಮಧ್ಯರಾತ್ರಿ ಸೂರಜ್​ ರೇವಣ್ಣ ವಿಚಾರಣೆ
ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿಗಳನ್ನ ಬೇರೆ ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಮನವಿ ಮಾಡಿದ್ದರು. ಈಗಾಗಲೇ ಒಳಸಂಚಿನಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ. ಹೀಗಾಗಿ ಅವರೆಲ್ಲ ಒಂದೇ ಜೈಲಿನಲ್ಲಿ ಇದ್ದರೆ ಮತ್ತೆ ಸಂಚು ರೂಪಿಸುವ ಸಾಧ್ಯತೆ ಇದೆ. ಕೊಲೆಯ ನಂತರ ಸಾಕ್ಷ್ಯ ನಾಶ ಮಾಡಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಎಲ್ಲರೂ ಒಟ್ಟಿಗೆ ಜೈಲಿನಲ್ಲಿ ಇದ್ದರೇ ಕುತಂತ್ರ ನಡೆಯುವ ಸಾಧ್ಯತೆ ದಟ್ಟವಾಗಿದೆ.
/newsfirstlive-kannada/media/post_attachments/wp-content/uploads/2024/06/darshan34.jpg)
ಹೀಗಾಗಿ ಜೈಲಿನಲ್ಲಿರುವ ಪ್ರಕರಣದ ಕೆಲ ಆರೋಪಿಗಳನ್ನು ಬೇರೆ ಕಡೆ ಶಿಫ್ಟ್ ಮಾಡಬೇಕು ಎಂದು ಎಸ್​​ಪಿಪಿ ಪ್ರಸನ್ನ ಕುಮಾರ್ ಅವರು ಕೋರ್ಟ್​​​ಗೆ ಮನವಿ ಮಾಡಿದ್ದಾರೆ. ತುಮಕೂರು ಕಾರಗೃಹಕ್ಕೆ ಕೆಲವರನ್ನ ಶಿಫ್ಟ್ ಮಾಡಲು ಎಸ್​​ಪಿಪಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಆರೋಪಿಗಳನ್ನ ಬೇರೆ ಜೈಲಿಗೆ ಶಿಫ್ಟ್ ಮಾಡುವ ಕುರಿತು ವಿಚಾರಣೆ ನಡೆಯುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us