/newsfirstlive-kannada/media/post_attachments/wp-content/uploads/2024/06/darshan-17-2.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ಆರೋಪಿ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಲಾಗಿದೆ. ಇಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು.
ಇದನ್ನೂ ಓದಿ: ದಾಸನಿಗೆ ಮತ್ತೆ ನಿರಾಸೆ.. ಜೈಲಲ್ಲಿ ಮನೆ ಊಟಕ್ಕಾಗಿ ಚಡಪಡಿಸುತ್ತಿರುವ ದರ್ಶನ್; ಹೈಕೋರ್ಟ್ ಹೇಳಿದ್ದೇನು?
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ದರ್ಶನ್ ಅವರು ಇದುವರೆಗೂ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿಲ್ಲ. ಹೀಗಾಗಿ ಇಂದು ಕೋರ್ಟ್ ಮುಂದೆ ಹಾಜರಾದ ದರ್ಶನ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ಅವಧಿ ಮುಂದುವರೆಸಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸರು ದರ್ಶನ್ ಅವರನ್ನು ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಅವರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಆಗಸ್ಟ್ 1ರ ತನಕ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿ ಮಹತ್ವದ ಆದೇಶ ನೀಡಿದೆ.
style="display:block; text-align:center;"
data-ad-layout="in-article"
data-ad-format="fluid"
data-ad-client="ca-pub-5961669566246184"
data-ad-slot="4722125161">
ಇದನ್ನೂ ಓದಿ: ನಿದ್ದೆ ಬರ್ತಿಲ್ಲ ನಂಗೆ.. ಜೈಲಿನಲ್ಲಿ ಗಳಗಳನೇ ಕಣ್ಣೀರಿಟ್ಟ ಪವಿತ್ರಾ ಗೌಡ; ದರ್ಶನ್‌ಗೆ ಪತ್ನಿಯೇ ಧೈರ್ಯಲಕ್ಷ್ಮಿ; ಆಗಿದ್ದೇನು?
ಇಂದು ಮನೆ ಊಟವೂ ಸಿಗಲಿಲ್ಲ!
ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೂ ಮುನ್ನವೇ ಹೈಕೋರ್ಟ್‌ನಲ್ಲಿ ದರ್ಶನ್ ಅವರಿಗೆ ನಿರಾಸೆಯಾಗಿದೆ. ಜೈಲಿನಲ್ಲಿರುವ ದರ್ಶನ್ ಮನೆ ಊಟದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯಲ್ಲಿ ಕಾನೂನಿನ ಅವಕಾಶಗಳ ಮೊದಲು ನೋಡೋಣ. ಅದು ಅಪ್ಲೈ ಆಗುತ್ತಾ ಇಲ್ವಾ ನೋಡೋಣ ಎಂದಿದೆ. ಇದೇ ವೇಳೆ ಎರಡು ಕಡೆಯ ವರದಿ ಸ್ವೀಕಾರ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.
ದರ್ಶನ್ ಪರ ವಕೀಲರು ಹೈಕೋರ್ಟ್‌ನಲ್ಲಿ ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಮನವಿ ಮಾಡಿದ್ದಾರೆ. ಇಂದು ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಆರಂಭಿಸಿದೆ. ನ್ಯಾಯಾಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರ ನ್ಯಾಯಪೀಠದ ವಿಚಾರಣೆ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲರಾದ ಕೆ.ಎನ್ ಫಣೀಂದ್ರ ಹಾಗೂ ಸರ್ಕಾರದ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಜರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
style="display:block"
data-ad-format="autorelaxed"
data-ad-client="ca-pub-5961669566246184"
data-ad-slot="1328393802">