newsfirstkannada.com

ಟೈಯರ್ ಸ್ಫೋಟ, ಬುಲೆರೋ ಟೆಂಪೋ ಪಲ್ಟಿ.. ಸ್ಥಳದಲ್ಲೇ ಮೂವರು ಸಾವು, 6 ಮಂದಿ ಗಂಭೀರ

Share :

Published February 26, 2024 at 9:43am

    ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ದುರ್ಘಟನೆ

    ಮೆಣಸಿನ ಕಾಯಿ ತೆಗೆದುಕೊಂಡು ವಾಪಸ್ ಹೋಗುವಾಗ ಆಕ್ಸಿಡೆಂಟ್

    ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ದಾವಣಗೆರೆ: ವೇಗವಾಗಿ ತೆರಳುತ್ತಿದ್ದ ವೇಳೆ ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿಯ ಪೂನಾ- ಬೆಂಗಳೂರು ‌ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಆಂಧ್ರದ ಮಂತ್ರಾಲಯಂ‌ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳಾದ ಮುಸ್ತಾನ್ (50), ಎಸ್​.ಟಿ ವೀರಣ್ಣ (30), ಪೆದ್ದ ವೆಂಕಣ್ಣ (38) ಮೃತ ದುರ್ದೈವಿಗಳು. ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರಲ್ಲಿ ‌ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಇವರೆಲ್ಲ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಂ‌ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿಕಾಯಿ ತೆಗೆದುಕೊಂಡು ತಡರಾತ್ರಿ ವಾಪಸ್ ತಮ್ಮೂರಿಗೆ ಹೋಗುವಾಗ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಈ ಸಂಬಂಧ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಟೈಯರ್ ಸ್ಫೋಟ, ಬುಲೆರೋ ಟೆಂಪೋ ಪಲ್ಟಿ.. ಸ್ಥಳದಲ್ಲೇ ಮೂವರು ಸಾವು, 6 ಮಂದಿ ಗಂಭೀರ

https://newsfirstlive.com/wp-content/uploads/2024/02/DVG_3_DEAD.jpg

Load More