Advertisment

ದಿಢೀರ್ ಹಿಮಾಚಲ ಪ್ರದೇಶಕ್ಕೆ ತೆರಳಿದ ಡಿಸಿಎಂ ಡಿ.ಕೆ ಶಿವಕುಮಾರ್; ಕಾರಣವೇನು?

author-image
admin
Updated On
ಡಿಸಿಎಂ ಡಿ.ಕೆ ಶಿವಕುಮಾರ್ ಕುಟುಂಬಕ್ಕೆ ಮತ್ತೆ ಬಿಗ್‌ ಶಾಕ್ ಕೊಟ್ಟ ಸಿಬಿಐ
Advertisment
  • ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಎದುರಾದ ಅಪಾಯ
  • ಮಲ್ಲಿಕಾರ್ಜುನ ಖರ್ಗೆ ಸೂಚನೆ ಮೇರೆಗೆ ಡಿಕೆಶಿವಕುಮಾರ್ ದೌಡು
  • ಸಿಎಂ ಸುಖವಿಂದರ್ ಸಿಂಗ್ ವಿರುದ್ಧ ತಿರುಗಿಬಿದ್ದ ಕಾಂಗ್ರೆಸ್ ಶಾಸಕರು

ರಾಜ್ಯಸಭಾ ಚುನಾವಣೆಯಲ್ಲಿ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಅಪಾಯ ಎದುರಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದಿಢೀರ್ ಅಂತ ಹಿಮಾಚಲ ಪ್ರದೇಶಕ್ಕೆ ತೆರಳಿದ್ದಾರೆ.

Advertisment

ಹಿಮಾಚಲ ಪ್ರದೇಶದಲ್ಲಿ ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಶಾಸಕರು ಹಾಗೂ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಸಿಎಂ ಸುಖವಿಂದರ್ ಸಿಂಗ್ ಸುಖು ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿನ ಗೊಂದಲ ಬಗೆಹರಿಸುವಂತೆ ಕಾಂಗ್ರೆಸ್ ಹೈಕಮಾಂಡ್, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದೆ. ಹೀಗಾಗಿ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ಹಿಮಾಚಲ ಪ್ರದೇಶಕ್ಕೆ ದೌಡಾಯಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಆಗಿದ್ದೇನು?
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರು ಸ್ಪರ್ಧೆ ಮಾಡಿದ್ದರು. ಸಂಖ್ಯಾಬಲದ ಪ್ರಕಾರ ಗೆಲ್ಲಬೇಕಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್‌ನ 6 ಶಾಸಕರು ಬಿಜೆಪಿಗೆ ಮತ ಹಾಕುವ ಮೂಲಕ ರಾಜ್ಯ ಸರ್ಕಾರಕ್ಕೂ ಅಪಾಯ ಎದುರಾಗಿದೆ.

ಕಾಂಗ್ರೆಸ್ ಶಾಸಕರು ಸಿಎಂ ವಿರುದ್ಧ ತಿರುಗಿ ಬಿದ್ದ ಮೇಲೆ ಬಿಜೆಪಿ ನಾಯಕರು ಹಿಮಾಚಲ ಪ್ರದೇಶ ರಾಜ್ಯಪಾಲರನ್ನು ಭೇಟಿ ಆಗಿದ್ದಾರೆ. ಬಿಜೆಪಿ ನಾಯಕರು ಸಿಎಂ ಸುಖವಿಂದರ್ ಸಿಂಗ್ ಸುಖು ಅವರಿಗೆ ವಿಶ್ವಾಸ ಮತಯಾಚನೆಗೆ ಒತ್ತಾಯ ಮಾಡುತ್ತಿದ್ದಾರೆ. ಈ ರಾಜಕೀಯದ ಹಂಗಾಮದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗೋ ಭೀತಿ ಇದೆ.

Advertisment

ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಇನ್ನು ಹಲವು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಹಾಗೂ ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ಡಿ.ಕೆ ಶಿವಕುಮಾರ್ ಅವರು ಎಂಟ್ರಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment