newsfirstkannada.com

ಪ್ರಜ್ವಲ್‌ ಪೆನ್‌ಡ್ರೈವ್ ಹಿಂದೆ ತನ್ನ ಕೈವಾಡ ಇದೆ ಎಂದವರಿಗೆ ಡಿಕೆಶಿ ಕೌಂಟರ್‌; ಈ ಬಗ್ಗೆ ಹೇಳಿದ್ದೇನು?

Share :

Published May 6, 2024 at 9:00pm

Update May 6, 2024 at 9:04pm

    ಆಡಿಯೋ ರಿಲೀಸ್‌ ಬಳಿಕ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ

    ನಾನೀಗ ಬೆಂಗಳೂರಿಂದ ಹೊರಗೆ ಇದ್ದು ಬಂದ ನಂತರ ಮಾತನಾಡುತ್ತೇನೆ

    ಡಿ.ಕೆ ಶಿವಕುಮಾರ ಅವರೇ ಪೆನ್‌ಡ್ರೈವ್ ಪ್ರಕರಣದ ರೂವಾರಿ- ದೇವರಾಜೇಗೌಡ

ಬೆಂಗಳೂರು: ಹಾಸನದ ಅಶ್ಲೀಲ ವಿಡಿಯೋ ಹರಿದಾಟ ಪ್ರಕರಣ ಈಗ ಸಂಪೂರ್ಣ ರಾಜಕೀಯ ತಿರುವು ಪಡೆದುಕೊಂಡಿದೆ. ಅಶ್ಲೀಲ ವಿಡಿಯೋ ವೈರಲ್ ಹಿಂದೆ ಇರೋದು ಯಾರು ಅನ್ನೋ ಪ್ರಶ್ನೆ ಈಗ ಸುಂಟರಗಾಳಿಯಾಗಿದೆ. ಜೆಡಿಎಸ್​ – ಬಿಜೆಪಿ ಅಂತ ಸುರುಳಿ ಹೊಡೀತಿದ್ದ ಕೇಸ್​ ಸದ್ಯ ಡಿಸಿಎಂ ಶಿವಕುಮಾರ್ ಅವರ ಬುಡಕ್ಕೆ ಬಂದು ನಿಂತಿದೆ. ವಕೀಲ ದೇವರಾಜೇಗೌಡ ಅವರು ಸುದ್ದಿಗೋಷ್ಟಿ ನಡೆಸಿ ಡಿಸಿಎಂ ಡಿ.ಕೆ ಶಿವಕುಮಾರ ಅವರೇ ಪೆನ್‌ಡ್ರೈವ್ ಪ್ರಕರಣದ ರೂವಾರಿ ಎಂದು ನೇರ ಆರೋಪ ಮಾಡಿದ್ದಾರೆ.

ವಕೀಲ ದೇವರಾಜೇಗೌಡರ ಆರೋಪ ಹಾಗೂ ಆಡಿಯೋ ರಿಲೀಸ್‌ಗೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಆಪಾದನೆ ಮಾಡಿದ್ದಾರೆ. ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಕೆಶಿ ಅವರು ತಿಳಿಸಿದ್ದಾರೆ.

ದೇವರಾಜೇಗೌಡರ ಆರೋಪಕ್ಕೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಕೆ ಶಿವಕುಮಾರ್, ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಶಿವಕುಮಾರ್ ಅವರು ಅಪಾದಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಕೇಸ್​ಗೆ ಮತ್ತೊಂದು ಟ್ವಿಸ್ಟ್​​​.. ಡಿಕೆಶಿ ಬಗ್ಗೆ ದೇವರಾಜೇಗೌಡ ಸ್ಫೋಟಕ ಸುಳಿವು 

ಇದೇ ದೇವರಾಜೇಗೌಡ ಈ ಹಿಂದೆಯೇ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಅಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ. ನಾನೀಗ ಬೆಂಗಳೂರಿಂದ ಹೊರಗೆ ಇದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಶಿವಕುಮಾರ್ ಅವರು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್‌ ಪೆನ್‌ಡ್ರೈವ್ ಹಿಂದೆ ತನ್ನ ಕೈವಾಡ ಇದೆ ಎಂದವರಿಗೆ ಡಿಕೆಶಿ ಕೌಂಟರ್‌; ಈ ಬಗ್ಗೆ ಹೇಳಿದ್ದೇನು?

https://newsfirstlive.com/wp-content/uploads/2024/04/Dk-Shivakumar-On-HDK-1.jpg

Load More