/newsfirstlive-kannada/media/post_attachments/wp-content/uploads/2025/03/DK_Shivakumar-3.jpg)
ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಮತ್ತೆ ಸದ್ದು ಮಾಡತೊಡಗಿದೆ. ಸಚಿವರನ್ನೇ ಟಾರ್ಗೆಟ್ ಮಾಡಲಾಗ್ತಿದೆ ಎಂಬ ಚರ್ಚೆ ಕಾಂಗ್ರೆಸ್ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದೇ ವಿಚಾರಕ್ಕೆ ಬೆಂಗಳೂರಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್.. ಹನಿಟ್ರ್ಯಾಪ್ ವಿಚಾರ ನನಗೆ ಗೊತ್ತಿಲ್ಲ. ಮೊದಲು ಪೊಲೀಸ್ ಠಾಣೆಗೆ ಹೋಗಿ ದೂರು ಕೊಡಲಿ. ಮೊದಲು ತನಿಖೆ ಆಗಬೇಕು ಎಂದು ನಾನು ಸಹ ಒತ್ತಾಯ ಮಾಡ್ತೇನೆ ಎಂದಿದ್ದಾರೆ.
ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಬಹಿರಂಗಗೊಂಡಿತ್ತು. ರಾಜ್ಯದ ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಲು ಯತ್ನಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅದು ನೇರವಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣಗೆ ಹನಿಟ್ರ್ಯಾಪ್ ಮಾಡಲು ಯತ್ನ ನಡೆದಿದೆ ಎಂಬ ಆರೋಪ ಮಾಡಿದೆ. ಇದೀಗ ಗೃಹ ಸಚಿವರಿಗೆ ತನಿಖೆ ಮಾಡುವಂತೆ ಮನವಿ ಮಾಡಿದ್ದೇನೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು. ಬ್ಲ್ಯಾಕ್‌ಮೇಲ್ ಎಲ್ಲಾ ಅಂತ್ಯ ಆಗಬೇಕು ಅಂತ ಸಚಿವ ರಾಜಣ್ಣ ಆಗ್ರಹಿಸಿದ್ದಾರೆ.
ಮತ್ತೊಂದು ಕಡೆ ಸಚಿವ ಸತೀಶ್ ಜಾರಕಿಹೊಳಿ ಮತ್ತೊಂದು ಆರೋಪ ಮಾಡಿದ್ದಾರೆ. ರಾಜ್ಯದ 40 ಮಂದಿಗಲ್ಲ.. 400 ಮಂದಿಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಈ ಎಲ್ಲಾ ಎಪಿಸೋಡ್ ಇಲ್ಲಿಗೆ ಕೊನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮಂಡ್ಯ ರೈತರಿಗೆ ಸಿಹಿ ಸುದ್ದಿ.. ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಚೆಲುವರಾಯಸ್ವಾಮಿ ಮಹತ್ವದ ಹೆಜ್ಜೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ