newsfirstkannada.com

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ; ಡಿ.ಕೆ ಶಿವಕುಮಾರ್ ಖಡಕ್ ಮಾತು; ಏನಂದ್ರು?

Share :

Published June 18, 2024 at 3:34pm

  ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಂಬಿ ಹಿಂದಿರುವ ನಟ ದರ್ಶನ್

  ದರ್ಶನ್ ಅವರ ಮನೆ ವಿಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

  ಬಂಧದಲ್ಲಿರುವ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಯ್ತಾ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಕೊಲೆ ಆರೋಪ ಎದುರಿಸುತ್ತಿರುವ ದರ್ಶನ್ ಗ್ಯಾಂಗ್ ಅನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ತನಿಖೆಯ ಮಧ್ಯೆ ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ಅವರ ಮನೆಯನ್ನ ತೆರವುಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ಆರ್‌.ಆರ್‌ ನಗರದಲ್ಲಿರುವ ನಟ ದರ್ಶನ್ ಅವರ ಮನೆ ರಾಜಕಾಲುವೆ ‌ಮೇಲೆ ಇದೆ. ರಾಜಕಾಲುವೆ ಒತ್ತುವರಿ ಆದರೂ ದರ್ಶನ್ ಮನೆಯನ್ನ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ನಟ ದರ್ಶನ್​ಗೆ ಈ ಪರಿಸ್ಥಿತಿ ಬರಬಾರದಿತ್ತು..’ ಇಂದ್ರಜಿತ್ ಲಂಕೇಶ್

ರಾಜಕಾಲುವೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ. ಯಾರೇ ಒತ್ತುವರಿ ಮಾಡಿ ತಡೆಯಾಜ್ಞೆ ತಂದಿರಬಹುದು. ನಾವು ಕಾನೂನಿನ ಪ್ರಕಾರ ಒತ್ತುವರಿ ಜಾಗವನ್ನು ತೆರವು ಮಾಡ್ತೀವಿ. ಯಾರೇ ಆದರೂ ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನೇ ಮಾಡುತ್ತೇವೆ. ನೀನು, ನಾನು ಯಾರೇ ಸ್ಟೇ ತಂದಿದ್ರು ತೆರವು ಮಾಡ್ತೇವೆ ಎಂದು ಡಿ.ಕೆ ‌ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ; ಡಿ.ಕೆ ಶಿವಕುಮಾರ್ ಖಡಕ್ ಮಾತು; ಏನಂದ್ರು?

https://newsfirstlive.com/wp-content/uploads/2024/06/Darshan-House-Dk-Shivakumar.jpg

Load More