newsfirstkannada.com

ಮುಂದಿನ ಸಿಎಂ ಆಗೋದರ ಬಗ್ಗೆ ಮತ್ತೆ DCM ಡಿಕೆ ಶಿವಕುಮಾರ್ ಮಾತು; ಏನಂದ್ರು?

Share :

Published April 15, 2024 at 12:17pm

Update April 15, 2024 at 12:23pm

    ಒಕ್ಕಲಿಗರ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪರೋಕ್ಷ ಸುಳಿವು

    ದೆಹಲಿಯಲ್ಲಿ ಏನು ಆಗಬೇಕು ಅದು ತೀರ್ಮಾನ ಆಗಿದೆ ಎಂದ ಡಿಕೆ

    ದೆಹಲಿ ಮಾತುಕತೆ ರಹಸ್ಯ, ಒಕ್ಕಲಿಗ ತಂತ್ರದ ಬಗ್ಗೆ ಭಾರೀ ಕುತೂಹಲ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್‌ ಪಕ್ಷದಲ್ಲಿ ಮುಂದಿನ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಒಕ್ಕಲಿಗರ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ದೆಹಲಿಯಲ್ಲಿ ಏನು ಆಗಬೇಕು ಅದು ತೀರ್ಮಾನ ಆಗಿದೆ ಎನ್ನುತ್ತಾ ಮುಂದಿನ ಸಿಎಂ ಆಗೋ ಆಸೆಯನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ.

ಮೈಸೂರಿನ ಒಕ್ಕಲಿಗರ ಸಭೆಯಲ್ಲಿ ಮಾತನಾಡಿರುವ ಡಿ.ಕೆ ಶಿವಕುಮಾರ್, ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ 5 ವರ್ಷದ ಸರ್ಕಾರ ಅಲ್ಲ, 10 ವರ್ಷದ ಸರ್ಕಾರ. ದೆಹಲಿಯಲ್ಲಿ ಏನು ಆಗಬೇಕು ಅದು ತೀರ್ಮಾನ ಆಗಿದೆ. ಅದರ ಬಗ್ಗೆ ಚರ್ಚೆ ಬೇಡ, ಚರ್ಚೆ ಆಗೋದು ಬೇಡ ಎನ್ನುತ್ತಾ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪರೋಕ್ಷವಾಗಿ ಸಿಎಂ ಸ್ಥಾನ ಸಿಗುತ್ತೆ ಎಂದು ಹೇಳಿಕೆ ನೀಡಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿರುವ ಈ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: 5 ಗ್ಯಾರಂಟಿಯಿಂದಾಗಿ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿ; ಮಹಿಳಾ ಆಯೋಗ ಸಿಡಿಮಿಡಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ಮತಯಾಚನೆ ಮಾಡುತ್ತಿದ್ದಾರೆ. ಮತದಾನಕ್ಕೆ ದಿನಗಣನೆ ಶುರುವಾಗಿರುವ ಈ ಸಂದರ್ಭದಲ್ಲಿ ಸಿಎಂ ಆಗೋದರ ಬಗ್ಗೆ ಮತ್ತೆ ಡಿ.ಕೆ ಶಿವಕುಮಾರ್ ಮಾತನಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಬಿಚ್ಚಿಟ್ಟ ದೆಹಲಿ ಮಾತುಕತೆ ರಹಸ್ಯ, ಒಕ್ಕಲಿಗ ತಂತ್ರ ಹಾಗೂ ಅವರ ರಾಜಕೀಯ ಸೂತ್ರ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಂದಿನ ಸಿಎಂ ಆಗೋದರ ಬಗ್ಗೆ ಮತ್ತೆ DCM ಡಿಕೆ ಶಿವಕುಮಾರ್ ಮಾತು; ಏನಂದ್ರು?

https://newsfirstlive.com/wp-content/uploads/2024/04/DCM-Dkshivakumar.jpg

Load More