ಬೆಳಗಾವಿ ರಾಜಕಾರಣ, ಡಿ.ಕೆ ಶಿವಕುಮಾರ್ ಅವರಿಂದ ಸರ್ಕಾರ ಪತನ
ಆಪರೇಷನ್ ಕಮಲಕ್ಕೆ 50, 100 ಕೋಟಿ ಎಂದು ಅಪಪ್ರಚಾರ ಮಾಡಿದ್ದಾರೆ
ಡಿ.ಕೆ ಶಿವಕುಮಾರ್ ಒಬ್ಬ ಪುಕ್ಲ, ಮೋಸಗಾರ ಎಂದ ರಮೇಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಚರ್ಚೆ ತಾರಕಕ್ಕೇರಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಮೇಲೆ ಮಾಡಿದ ಆರೋಪಗಳ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೌಂಟರ್ ಅಟ್ಯಾಕ್ ಮಾಡಿದ್ದಾರೆ. ದಿಢೀರ್ ಸುದ್ದಿಗೋಷ್ಟಿ ಕರೆದು ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನೇ ಟಾರ್ಗೆಟ್ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಟಿ ಆರಂಭದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರು ಪ್ರಸ್ತಾಪಿಸಿದ ರಮೇಶ್ ಜಾರಕಿಹೊಳಿ ಅವರು, ಡಿ.ಕೆ ಶಿವಕುಮಾರ್ ಅವರ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. ಆಪರೇಷನ್ ಕಮಲಕ್ಕೆ 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆಪರೇಷನ್ ಕಮಲ ಎಲ್ಲೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಫೇಲ್ ಆಗಿದೆ. ಜನರ ದಿಕ್ಕು ತಪ್ಪಿಸಲು ಕಾಂಗ್ರೆಸ್ ನಾಯಕರು ಈ ರೀತಿ ಮಾತಾಡುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಅವರೊಬ್ಬರೇ ಯಾಕೆ ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ. 6 ತಿಂಗಳು ಏನು ಮಾತಾಡಲ್ಲ ಎಂದು ಸಂಕಲ್ಪ ಮಾಡಿದ್ದೆ. ಆದರೆ ನಮ್ಮ ಹೆಸರು ಕೆಡಿಸಿದ್ದರಿಂದ ನಾನು ಅನಿವಾರ್ಯವಾಗಿ ಮಾತನಾಡುತ್ತಿದ್ದೇನೆ. ಬೆಳಗಾವಿ ರಾಜಕಾರಣ ಹಾಗೂ ಡಿ.ಕೆ ಶಿವಕುಮಾರ್ ಅವರಿಂದಲೇ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ ಒಬ್ಬ ಪುಕ್ಲ, ಮೋಸಗಾರ ಎಂದಿರುವ ರಮೇಶ ಜಾರಕಿಹೊಳಿ ಅವರು ಅತಿ ಶೀಘ್ರದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗಲಿದ್ದಾರೆ. ನನಗೆ ಆಗಿರೋ ಕಷ್ಟ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಆಗಲ್ಲ. ಆದರೆ ಬೆಳಗಾವಿ ರಾಜಕಾರಣ ಹಾಗೂ ಡಿಕೆಶಿಯಿಂದ ಸರ್ಕಾರ ಬೀಳಲಿದೆ ಎಂದು ರಮೇಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಇನ್ನು, ಸಿಡಿ ಮಾಸ್ಟರ್ ಡಿಕೆಶಿಗೆ ಅವರಿಗೆ ಸಿಡಿಯೇ ಶಕ್ತಿ ಎಂದ ಅವರು ಇತ್ತೀಚೆಗೆ ನೆಲಮಂಗಲದ ಮಾಜಿ ಶಾಸಕ ನಾಗರಾಜ್‌ಗೆ ಬೆದರಿಕೆ ಹಾಕಿದ್ದಾರೆ. ಮಾಜಿ ಶಾಸಕರೊಬ್ಬರ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ