/newsfirstlive-kannada/media/post_attachments/wp-content/uploads/2023/12/Siddaramaiah-Dkshivakumar-1.jpg)
ಸಿಎಂ ಸಿದ್ದರಾಮಯ್ಯ ನೇತೃತ್ವದ 2.O ಸರ್ಕಾರ ಅಸ್ತಿತ್ವಕ್ಕೆ ಬಂದು ಇನ್ನೂ 2 ವರ್ಷ ಕಳೆದಿಲ್ಲ. ಆದರೆ ದಿನಗಳು ಉರುಳುತ್ತಿದ್ದಂತೆ ಕಾಂಗ್ರೆಸ್ ಸರ್ಕಾರಕ್ಕೆ ಅಡೆತಡೆಗಳು ಒಂದೊಂದಾಗೇ ಎದುರಾಗುತ್ತಿವೆ. ಬಿಜೆಪಿ, ಜೆಡಿಎಸ್ ನಾಯಕರ ಬಿಲ್ಲು, ಬಾಣಗಳ ಮಧ್ಯೆ ಕಾಂಗ್ರೆಸ್ ನಾಯಕರ ಮಾತುಗಳು ಸರ್ಕಾರದ ಬುಡಕ್ಕೆ ಚುಚ್ಚಿತ್ತಿವೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರೀಯ ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ್ದು ಮಹತ್ವದ ಹೇಳಿಕೆಗಳನ್ನ ನೀಡಿದ್ದಾರೆ. ಸಂದರ್ಶನದಲ್ಲಿ ಮಾತನಾಡಿರುವ ಡಿಕೆಶಿ ಅವರು ಸಿಎಂ ಸೀಟ್ ಹಂಚಿಕೆಯಲ್ಲಿ ನಾವೊಂದು ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು. ಇದು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.
/newsfirstlive-kannada/media/post_attachments/wp-content/uploads/2024/03/Dkshivakumar-ED-Case.jpg)
ಡಿ.ಕೆ ಶಿವಕುಮಾರ್ ಅವರ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸೀಟು ಹಂಚಿಕೆಯ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್​ ಏನು​ ತೀರ್ಮಾನ ಮಾಡುತ್ತೋ ಅದಕ್ಕೆ ಬದ್ಧ. ಹೈಕಮಾಂಡ್​​​ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ​​ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಲಾಯಲ್ ಆಗಿದ್ದೇನೆ, ಒಂದು ದಿನ ಫಲ ಸಿಗಲಿದೆ -CM ಆಗುವ ಆಸೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್
ಸಿಎಂ ಮಾತಿಗೆ ಜೈ ಎಂದ ಡಿಕೆಶಿ!
ಸಿಎಂ ಸಿದ್ದರಾಮಯ್ಯ ಅವರ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ಫೈನಲ್​. ಸಿಎಂ ಸಿದ್ದರಾಮಯ್ಯ ಹೇಳಿದ ಮೇಲೆ ತಕರಾರೇ ಇಲ್ಲ. ಸಿದ್ದರಾಮಯ್ಯ ಹೇಳಿದ್ಮೇಲೆ ನೋ ಕ್ವಶನ್. ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಟನಾಗಿದ್ದೇನೆ. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೇನೆ ಎಂದು ಡಿಸಿಎಂ ಮುಗುಳ್ನಕ್ಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us