/newsfirstlive-kannada/media/post_attachments/wp-content/uploads/2024/12/DK-Shivkumar.jpg)
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರ ಚಿಕಿತ್ಸೆ ಫಲಿಸದೇ ಸದಾಶಿವನಗರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನು, ಗಣ್ಯರ ದಂಡೇ ಎಸ್.ಎಂ ಕೃಷ್ಣ ಅವರ ದರ್ಶನಕ್ಕಾಗಿ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡುತ್ತಿದೆ. ಈಗ ಡಿಸಿಎಂ ಡಿ.ಕೆ ಶಿವಕುಮಾರ್​​ ಅವರು ಎಸ್.ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ನೋಡಿ ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಬಿಕ್ಕಿಬಿಕ್ಕಿ ಅತ್ತರು.
/newsfirstlive-kannada/media/post_attachments/wp-content/uploads/2024/12/DK-Shivkumar-Crying.jpg)
ಈ ಬಗ್ಗೆ ಟ್ವೀಟ್​ ಮಾಡಿದ್ದ ಡಿಕೆಶಿ
ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಟ್ವೀಟ್​ ಮಾಡಿದ್ದರು.
ಇದನ್ನೂ ಓದಿ:ಎಸ್.ಎಂ ಕೃಷ್ಣ ನಿಧನ; ಬೆಂಗಳೂರಿನ ನಿವಾಸಕ್ಕೆ ಕಣ್ಣೀರಿಡುತ್ತ ಬಂದ ನಟಿ ರಮ್ಯಾ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us