newsfirstkannada.com

DKShivakumar: ಡಿಸಿಎಂ ಡಿ.ಕೆ ಶಿವಕುಮಾರ್‌ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ; ಟ್ರೆಂಡಿಂಗ್‌!

Share :

Published May 15, 2024 at 2:27pm

  ಡಿಕೆ ಹೆಗಲಮೇಲೆ ಕೈ ಹಾಕಿರೋ ಫೋಟೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

  ಅಣ್ಣನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಸಾಂಗ್ ಹಂಚಿಕೊಂಡ ಸಂಸದ ಡಿ.ಕೆ ಸುರೇಶ್

  ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರ 62ನೇ ಜನ್ಮದಿನ. ಡಿ.ಕೆ ಶಿವಕುಮಾರ್ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು, ರಾಜ್ಯ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಸೆಲೆಬ್ರೇಟ್ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಡಿಕೆ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದು, ಟ್ರೆಂಡಿಂಗ್ ಕ್ರಿಯೇಟ್ ಮಾಡಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ವಿಶೇಷವಾದ ಶುಭಾಶಯ ಕೋರಿದ್ದಾರೆ. ಡಿಕೆಶಿ ಹೆಗಲಮೇಲೆ ಕೈ ಹಾಕಿರೋ ಫೋಟೋ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ಹುಟ್ಟು ಹಬ್ಬದ ಶುಭಾಶಯಗಳು ಮೈ ಡಿಯರ್ ಫ್ರೆಂಡ್‌ ಹಾಗೂ ಸಹೋದ್ಯೋಗಿ. ನಿಮ್ಮ ಶ್ರದ್ದೆ, ಸಂಘಟನಾ ಕೌಶಲ್ಯ, ಬದ್ಧತೆ ಯಾವಾಗಲೂ ಎದ್ದು ಕಾಣುತ್ತದೆ.

ಇದನ್ನೂ ಓದಿ: ಬಿಜೆಪಿ ಮುಖಂಡ ದೇವರಾಜೇಗೌಡ, ಮಾಜಿ ಶಾಸಕ ಪ್ರಿತಮ್ ಗೌಡ ಆಪ್ತರ ಮನೆ ಮೇಲೆ SIT ದಾಳಿ.. ಏನೆಲ್ಲಾ ಸಿಕ್ತು ಗೊತ್ತಾ? 

ನಿಮಗೆ ಯಶಸ್ಸು, ಖುಷಿ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರೀತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಶುಭಾಶಯಕ್ಕೆ ಡಿ.ಕೆ ಶಿವಕುಮಾರ್ ಅವರು ಕೂಡ ಧನ್ಯವಾದಗಳನ್ನು ತಿಳಿಸಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ನಾಡಿನ ಜನರ ಕಲ್ಯಾಣಕ್ಕಾಗಿ ಒಟ್ಟಾಗಿ ಶ್ರಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಸಹೋದರ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ತನ್ನ ಅಣ್ಣನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಸಾಂಗ್‌ ಒಂದನ್ನ ಹಂಚಿಕೊಂಡಿದ್ದಾರೆ. ನೆತ್ತರಲ್ಲಿ ನೆಂದ ಭೂಮಿ, ಬೆವರಿನಲ್ಲಿ ಬೆಂದ ಭೂಮಿ ಅನ್ನೋ ಸಾಹಿತ್ಯ ಬರೆದು ನಟ ದರ್ಶನ್ ಅಭಿನಯದ ಕಾಟೇರ ಮ್ಯೂಸಿಕ್‌ನಲ್ಲಿ ಹಾಡು ತಯಾರಿಸಿದ್ದಾರೆ.

ರಾಜ್ಯದ ಉಪ ಮುಖ್ಯಮಂತ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರು, ಕನ್ನಡಿಗರ ಭರವಸೆಯ ನಾಯಕ, ಪ್ರೀತಿಯ ಸಹೋದರರಾದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಹಾಗೂ ಮತ್ತಷ್ಟು ಜನಸೇವೆ ಮಾಡುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನು, ಸೋಷಿಯಲ್ ಮೀಡಿಯಾಗಳಲ್ಲಿ ಸಚಿವರು, ಕಾಂಗ್ರೆಸ್ ನಾಯಕರು ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ವಿಶೇಷ ಶುಭಾಶಯಗಳನ್ನು ಕೋರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

DKShivakumar: ಡಿಸಿಎಂ ಡಿ.ಕೆ ಶಿವಕುಮಾರ್‌ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ; ಟ್ರೆಂಡಿಂಗ್‌!

https://newsfirstlive.com/wp-content/uploads/2024/05/Siddaramaiah-Dk-Shivakumar.jpg

Load More