/newsfirstlive-kannada/media/post_attachments/wp-content/uploads/2024/11/Shahrukh-Khan.jpg)
ಮುಂಬೈ: ನಟ ಸಲ್ಮಾನ್ ಖಾನ್ ಬೆನ್ನಲ್ಲೇ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್‌ಗೆ ಕೊಲೆ ಬೆದರಿಕೆ ಹಾಕಲಾಗಿದೆ. ಶಾರುಖ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆಯೊಂದು ಬಂದಿದೆ.
ಇನ್ನು, ಮುಂಬೈ ಬಾಂದ್ರಾ ಪೊಲೀಸರಿಗೆ ಕರೆ ಮಾಡಿರೋ ಈ ಕೆಡಿಗೇಡಿ ಬರೋಬ್ಬರಿ 50 ಲಕ್ಷ ರೂ. ಬೇಡಿಕೆ ಇಟ್ಟಿದ್ದಾನೆ. ಇದರ ಬೆನ್ನಲ್ಲೇ ಎಚ್ಚೆತ್ತ ಬಾಂದ್ರಾ ಪೊಲೀಸ್ರು ಕೇಸ್ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.
ಬೆದರಿಕೆ ಹಾಕಿದ್ಯಾರು?
ಛತ್ತೀಸ್‌ಗಢದ ರಾಯ್ಪುರದ ಫೈಜಾನ್ ಖಾನ್ ಅನ್ನೋರ ಹೆಸರಲ್ಲಿರೋ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಫೈಜಾನ್ ಖಾನ್ ಅವರನ್ನು ವಶಕ್ಕೆ ಪಡೆದ ಪೊಲೀಸ್ರು ವಿಚಾರಣೆಗೆ ಒಳಪಡಿಸಿದ್ದಾರೆ. ಈತ ವೃತ್ತಿಯಲ್ಲಿ ವಕೀಲನಾಗಿದ್ದು, ಮೊಬೈಲ್ ಕಳ್ಳತನವಾಗಿದೆ ಎಂದಿದ್ದಾರೆ. ಹಾಗಾಗಿ ಶಾರುಖ್ ಖಾನ್‌ಗೆ ಬೆದರಿಕೆ ಹಾಕಲು ಈ ಕಳ್ಳತನ ಮಾಡಿರಬಹುದು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಬಂದಿತ್ತು. ಇದಾದ ಬೆನ್ನಲ್ಲೇ ಇವರಿಗೆ ಹೈ ಸೆಕ್ಯೂರಿಟಿ ನೀಡಲಾಯ್ತು. ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿರೋ ಕೇಸಲ್ಲಿ ವ್ಯಕ್ತಿ ಬಂಧನ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ