newsfirstkannada.com

×

ಕಂದಕಕ್ಕೆ ಉರುಳಿ ಬಿದ್ದ ಬಸ್‌ ದುರಂತ; ಸಾವಿನ ಸಂಖ್ಯೆ 30ಕ್ಕೆ ಏರಿಕೆ; ಪ್ರಯಾಣಿಕರ ರಕ್ಷಣೆಗೆ ಹರಸಾಹಸ

Share :

Published November 15, 2023 at 2:07pm

Update November 15, 2023 at 2:08pm

    ರಾಷ್ಟ್ರೀಯ ಹೆದ್ದಾರಿಯಿಂದ 300 ಅಡಿ ಕಂದಕಕ್ಕೆ ಉರುಳಿದ ಬಸ್

    30 ಪ್ರಯಾಣಿಕರ ಮೃತದೇಹವನ್ನು ಹೊರ ತೆಗೆದ ರಕ್ಷಣಾ ಸಿಬ್ಬಂದಿ

    ಒಂದು ವಾರದೊಳಗೆ ಇದೇ ಮಾರ್ಗದಲ್ಲಿ ಸಂಭವಿಸಿದ 2ನೇ ಅಪಘಾತ

ಶ್ರೀನಗರ: ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದ್ದು, ಉಳಿದ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ. ರಸ್ತೆಯಲ್ಲಿ ಬಸ್ ನಿಯಂತ್ರಣ ತಪ್ಪಿದ್ದು, ಬಟಾಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿ ಟ್ರಿಂಗಲ್-ಅಸ್ಸಾರ್ ಬಳಿ 300 ಅಡಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.

ಕಂದಕಕ್ಕೆ ಬಸ್ ಉರುಳಿ ಬಿದ್ದಿದ್ದು 30 ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ JK02CN-6555 ನಂಬರ್ ಹೊಂದಿರೋ ಈ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಳೆದ ಒಂದು ವಾರದಲ್ಲಿ ದೋಡಾ ಜಿಲ್ಲೆಯಲ್ಲಿ ನಡೆದ ಎರಡನೇ ರಸ್ತೆ ಅಪಘಾತ ಇದಾಗಿದೆ.

ಇದನ್ನೂ ಓದಿ: BREAKING: ಆಳವಾದ ಕಂದಕಕ್ಕೆ ಉರುಳಿ ಬಿದ್ದ ಬಸ್‌.. 10 ಮಂದಿ ದಾರುಣ ಸಾವು

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಸ್ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಬಸ್ ಅಪಘಾತದಲ್ಲಿ ಜೀವಹಾನಿಯಿಂದ ಘಟನೆಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಂದಕಕ್ಕೆ ಉರುಳಿ ಬಿದ್ದ ಬಸ್‌ ದುರಂತ; ಸಾವಿನ ಸಂಖ್ಯೆ 30ಕ್ಕೆ ಏರಿಕೆ; ಪ್ರಯಾಣಿಕರ ರಕ್ಷಣೆಗೆ ಹರಸಾಹಸ

https://newsfirstlive.com/wp-content/uploads/2023/11/Bus-Accident-3.jpg

Load More