newsfirstkannada.com

ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ- ಸಿಎಂ ಸಿದ್ದರಾಮಯ್ಯ

Share :

20-11-2023

    ಭಾರತದ ವಿಶ್ವಕಪ್​ ಟ್ರೋಫಿ ಕನಸು ಭಗ್ನ, ಪ್ಲೇಯರ್ಸ್ ಬೇಸರ

    ಅಹಮದಾಬಾದ್​ನಲ್ಲಿ ನಡೆದ ವಿಶ್ವಕಪ್​ನಲ್ಲಿ ಭಾರತಕ್ಕೆ ಸೋಲು

    ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ಸಿದ್ದರಾಮಯ್ಯ ಹೇಳಿದ್ದೇನು?

ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಮುಗ್ಗರಿಸುವ ಭಾರತ ತಂಡಕ್ಕೆ ಎಲ್ಲೆಡೆಯಿಂದ ಅಭಿಮಾನಿಗಳು ಧೈರ್ಯ ಹೇಳುತ್ತಿದ್ದಾರೆ. ಸೋಷಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ಫ್ಯಾನ್ಸ್​ We are Proud of You ಎಂದು ಹೇಳುತ್ತಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಕೂಡ ರೋಹಿತ್ ಶರ್ಮಾ ಸಾರಥ್ಯದ ತಂಡಕ್ಕೆ ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ. ಸೋಲು-ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ ಎಂದು ಶಕ್ತಿ ತುಂಬಿದ್ದಾರೆ.

ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಗೆದ್ದಿರುವ ಆಸ್ಟ್ರೇಲಿಯಾ ಟೀಮ್​ಗೆ ಅಭಿನಂದನೆಗಳು. ಇಡೀ ವರ್ಲ್ಡ್​​ಕಪ್​ ಟೂರ್ನಿಯಲ್ಲಿ ಭಾರತದ ಆಟಗಾರರು ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದಲ್ಲಿ ತೋರಿದ ನಿಮ್ಮ ಪ್ರದರ್ಶನ ಹಾಗೂ ಅಜೇಯ ಅಭಿಯಾನವು ಬಹುಕಾಲ ನೆನಪಲ್ಲಿ ಉಳಿದುಕೊಳ್ಳಲಿದೆ. ಸೋಲು-ಗೆಲುವು ಯಾವುದೇ ಆಟದ ಅವಿಭಾಜ್ಯ ಅಂಗವಾಗಿರುತ್ತದೆ. ವರ್ಲ್ಡ್​​ಕಪ್​ ಫೈನಲ್​​ನಲ್ಲಿ ಎಡವಿ ಸೋಲಿನ ದುಃಖದಲ್ಲಿರುವ ನಮ್ಮ ತಂಡ ಕ್ಯಾಪ್ಟನ್​ ರೋಹಿತ್​ ಶರ್ಮಾ ಸಾರಥ್ಯದ ಹುಡುಗರ ಜೊತೆ ಎಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಧೈರ್ಯ ಹೇಳಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಸೋಲೊಪ್ಪಿಕೊಂಡಿದೆ. ಇದರಿಂದ ಕ್ಯಾಪ್ಟನ್​ ರೋಹಿತ್ ಶರ್ಮಾ ಸೇರಿದಂತೆ ಇಡೀ ಆಟಗಾರರು ಬೇಸರದಲ್ಲಿದ್ದಾರೆ. ಹೀಗಾಗಿಯೇ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ. ಫೈನಲ್ ಪಂದ್ಯದಲ್ಲಿ ಭಾರತ 50 ಓವರ್​​ಗಳಲ್ಲಿ 10 ವಿಕೆಟ್​​ ಕಳೆದುಕೊಂಡು 240 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ 43 ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 241 ರನ್​ ಗಳಿಸಿ ಗೆಲುವು ಪಡೆಯಿತು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ- ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2023/11/ROHIT_CM_SIDDARAMAIAH.jpg

Load More