ತಲೆಮರೆಸಿಕೊಂಡ ಅಪ್ರಾಪ್ತ, ಆರೋಪಿಗಾಗಿ ಪೊಲೀಸರು ಹುಡುಕಾಟ
ಏರಿಯಾದಲ್ಲಿ ನಡೆದುಕೊಂಡು ಹೋಗುವಾಗ ದುಷ್ಕರ್ಮಿಗಳಿಂದ ದರೋಡೆ
ದುಷ್ಕರ್ಮಿಗಳಿಗೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಚಾಕು ಇರಿದು ಯುವಕನ ಹತ್ಯೆ
ನವದೆಹಲಿ: ಮೊಬೈಲ್ ಹಾಗೂ ಹಣ ಕಿತ್ತುಕೊಳ್ಳಲು ಬಂದ ನಾಲ್ವರು ದುಷ್ಕರ್ಮಿಗಳಿಗೆ ಪ್ರತಿರೋಧ ವ್ಯಕ್ತಪಡಿಸಿದ ಯುವಕನಿಗೆ ಚಾಕು ಇರಿದು ಹತ್ಯೆ ಮಾಡಲಾಗಿರುವ ಘಟನೆ ದೆಹಲಿಯ ಮಂಡೋಲಿ ಪ್ರದೇಶದಲ್ಲಿ ನಡೆದಿದೆ.
ಸಲ್ಮಾನ್ (25) ಕೊಲೆಯಾದ ಯುವಕ. ಮಂಡೊಲಿ ಪ್ರದೇಶದಲ್ಲಿ ಯುವಕ ನಡೆದುಕೊಂಡು ಹೋಗುವಾಗ ನಾಲ್ವರು ದುಷ್ಕರ್ಮಿಗಳು ಮೊಬೈಲ್ ಹಾಗೂ 500 ರೂಪಾಯಿ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಇದಕ್ಕೆ ಯುವಕ ಪ್ರತಿರೋಧ ಒಡ್ಡಿದ್ದಾನೆ. ಹೀಗಾಗಿ ಆರೋಪಿಗಳು ತೀವ್ರವಾಗಿ ಹಲ್ಲೆ ಮಾಡಿ ಚಾಕು ಇರಿದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ. ಪ್ರಕರಣ ಸಂಬಂಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದು ಇನ್ನೋರ್ವ ಆರೋಪಿ ಅಪ್ರಾಪ್ತನಾಗಿದ್ದು ತಪ್ಪಿಸಿಕೊಂಡಿದ್ದಾನೆ. ಹೀಗಾಗಿ ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ