newsfirstkannada.com

BREAKING: ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ಶಾಕ್; ದೆಹಲಿ ಕೋರ್ಟ್ ಮಹತ್ವದ ಆದೇಶ

Share :

Published March 22, 2024 at 9:09pm

    ದೇಶದಲ್ಲೇ ಮೊದಲ ಬಾರಿಗೆ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ಬಂಧನ

    ಸತತ 3 ಗಂಟೆಗಳ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ

    ವಿಚಾರಣೆಗಾಗಿ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ED ಮನವಿ

ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ನಿನ್ನೆ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದಲ್ಲೇ ಮೊದಲ ಬಾರಿಗೆ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನ ಬಂಧಿಸಿದ್ದರು. ಇದೀಗ ಸಿಎಂ ಕೇಜ್ರಿವಾಲ್ ಅವರನ್ನ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧದ ಗಂಭೀರ ಆರೋಪದ ಬಗ್ಗೆ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್‌ 28ರ ತನಕ ಅಂದ್ರೆ ಇಂದಿನಿಂದ ಆರು ದಿನಗಳ ಇಡಿ ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ: Arvind Kejriwal ಬಂಧನಕ್ಕೂ ಮೊದಲು ಅವರ ನಿವಾಸದಲ್ಲಿ ಏನೆಲ್ಲಾ ಆಯ್ತು..? 6 ಬಿಗ್ ಅಪ್​ಡೇಟ್ಸ್​

ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಸತತ 3 ಗಂಟೆಗಳ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಬಳಿಕ ತೀರ್ಪು ಕಾಯ್ದಿರಿಸಿತ್ತು.

3 ಗಂಟೆಗಳ ಬಳಿಕ ಮಹತ್ವದ ತೀರ್ಪು ನೀಡಿರುವ ಕೋರ್ಟ್ ಮಾರ್ಚ್ 28ರವರೆಗೆ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಂಗ ಬಂಧನ ನೀಡಿ ಆದೇಶ ನೀಡಿದೆ. ನಿನ್ನೆ ಒಂದು ರಾತ್ರಿ ಇಡಿ ಕಚೇರಿಯಲ್ಲಿ ಕಾಲ ಕಳೆದಿರುವ ಅರವಿಂದ್ ಕೇಜ್ರಿವಾಲ್ ಈಗಾಗಲೇ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಇದೀಗ ಮತ್ತೊಮ್ಮೆ ಜಾಮೀನು ಕೋರಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ಶಾಕ್; ದೆಹಲಿ ಕೋರ್ಟ್ ಮಹತ್ವದ ಆದೇಶ

https://newsfirstlive.com/wp-content/uploads/2024/03/Aravind-Kejriwal.jpg

Load More