ರಸ್ತೆಯಲ್ಲಿ ಬರುತ್ತಿದ್ದ ಯುವಕನನ್ನು ತಡೆದು ಹಲ್ಲೆ ಮಾಡಿ ಕೊಲೆ
ಮಗಳ ಜತೆ 2 ವರ್ಷದಿಂದ ಸಂಬಂಧ ಇಟ್ಟುಕೊಂಡಿದ್ದಕ್ಕೆ ಕೋಪ
ಕೊಲೆ ಮಾಡುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
ನವದೆಹಲಿ: ಮಗಳ ಜೊತೆ ಸಂಬಂಧ ಇಟ್ಟುಕೊಂಡ ಹಿನ್ನೆಲೆಯಲ್ಲಿ ತಂದೆ, ಸಹೋದರರು ಸೇರಿ ಯುವಕನೊಬ್ಬನ ಎದೆಗೆ, ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಜಾಫ್ರಾಬಾದ್ನಲ್ಲಿ ನಡೆದಿದೆ.
ಸಲ್ಮಾನ್ (25) ಹಲ್ಲೆಗೊಳಗಾಗಿ ಮೃತಪಟ್ಟ ಯುವಕ. ಸಲ್ಮಾನ್ ಬೈಕ್ ಅನ್ನು ಚಲಾಯಿಸಿಕೊಂಡು ಜಾಫ್ರಾಬಾದ್ನ ಗಲ್ಲಿಯೊಂದರ ರಸ್ತೆಯಲ್ಲಿ ಬರುತ್ತಿದ್ದನು. ಈ ವೇಳೆ ಅಡ್ಡ ಹಾಕಿದ ಯುವತಿಯ ತಂದೆ ಮತ್ತು ಸಹೋದರರು ಮೊದಲು ಜಗಳ ಮಾಡಿಕೊಂಡಿದ್ದಾರೆ. ಆಗ ಜಗಳ ತಾರಕಕ್ಕೇರುತ್ತಿದ್ದಂತೆ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಎದೆಗೆ ಮತ್ತು ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದದ್ದರಿಂದ ಯುವಕ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಯುವತಿಯ ತಂದೆ, ಸಹೋದದರು ಸೇರಿ ಯುವಕನ ಮೇಲೆ ಹಲ್ಲೆ ಮಾಡಿ ಕೊಲ್ಲುತ್ತಿರುವ ಘಟನೆಯು ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಸಾವನ್ನಪ್ಪಿರುವ ಸಲ್ಮಾನ್ ಯುವತಿಯ ಜೊತೆ ಕಳೆದ ಎರಡು ವರ್ಷದಿಂದ ಸಂಬಂಧ ಹೊಂದಿದ್ದನು. ಈ ಬಗ್ಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇಬ್ಬರು ಜೋತೆಯಾಗಿ ಓಡಾಡುತ್ತಿದ್ದರು ಎನ್ನಲಾಗಿದೆ.
ಹೀಗಾಗಿ ಕೋಪಗೊಂಡ ಆಕೆಯ ತಂದೆ, ಸಹೋದರರು ಯುವಕನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ