/newsfirstlive-kannada/media/post_attachments/wp-content/uploads/2024/02/CKM_STUDENT_DEAD.jpg)
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಡೆಂಗ್ಯೂಗೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು ಇದು ಮೊದಲ ಬಲಿಯಾಗಿದೆ.
ನಗರದ ಮೊಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹನಾ ಬಾನು (18) ಡೆಂಗ್ಯೂವಿನಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಯುವತಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ಚಿಕ್ಕಮಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ: VIDEO: ಬೈಕ್ಗೆ ಬಸ್ ಡಿಕ್ಕಿ.. ಹೆಲ್ಮೆಟ್ ಇಲ್ಲದೇ ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಇನ್ನು ಡೆಂಗ್ಯೂವಿನ ರೋಗಲಕ್ಷಣಗಳು ಸಾಮಾನ್ಯವಾಗಿ ಸೋಂಕು ಆದ ಬಳಿಕ 3 ಅಥವಾ 14 ದಿನಗಳಲ್ಲಿ ಕಾಣಿಸಿಕೊಳ್ಳುತ್ತವೆ. ಇದರ ಲಕ್ಷಣಗಳೆಂದರೆ ಹೆಚ್ಚಿನ ಜ್ವರ, ತಲೆನೋವು, ವಾಂತಿ, ಸ್ನಾಯು ಮತ್ತು ಸಂಧಿ ನೋವು ದೇಹದಲ್ಲಿ ಕಂಡು ಬರುತ್ತಾವೆ. ಈಡಿಸ್ ಈಜಿಪ್ಟೆ ಎಂಬ ಸೊಳ್ಳೆ ಕಡಿತದಿಂದ ಈ ಡೆಂಗ್ಯೂ ಜ್ವರ ಬರುತ್ತದೆ. ಹೀಗಾಗಿ ಸೊಳ್ಳೆಗಳಿಂದ ಆದಷ್ಟು ಅಂತರ ಕಾಯ್ದುಕೊಂಡು ಜಾಗೃತವಾಗಿರಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ