newsfirstkannada.com

Lok Sabha Election: ಚುನಾವಣಾ ಅಖಾಡಕ್ಕಿಳಿದ ಮಾಜಿ ಸಿಎಂ ದೇವರಾಜ್ ಅರಸು ಮೊಮ್ಮಗ..!

Share :

18-11-2023

    ಅರಸು ಮೊಮ್ಮಗ ಸೂರಜ್ ಹೆಗ್ಡೆ ಚುನಾವಣಾ ಅಖಾಡಕ್ಕೆ

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧಾರ

    ಅರಸು ಹುಟ್ಟೂರಿಗೆ ಭೇಟಿ ಕೊಟ್ಟು ಏನ್ ಹೇಳಿದ್ರು ಗೊತ್ತಾ..?

ಮೈಸೂರು: ಲೋಕಸಭೆ ಚುನಾವಣೆ ಅಖಾಡಕ್ಕೆ ಜನಪ್ರಿಯ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ಮೊಮ್ಮಗ ಕಣಕ್ಕಿಳಿಯೋದು ಪಕ್ಕಾ ಆಗಿದೆ. ಈ ಮೂಲಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಕಾಂಗ್ರೆಸ್​ನಲ್ಲಿ ಹೆಚ್ಚಾಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಅರಸು ಮೊಮ್ಮಗ ಸೂರಜ್ ಹೆಗ್ಡೆ.. ದೇವರಾಜ್ ಅರಸು ಹುಟ್ಟೂರು ಹುಣಸೂರಿನ ಕಲ್ಲಹಳ್ಳಿಗೆ ಇಂದು ಭೇಟಿ ನೀಡಿದ್ದರು. ಅರಸು ಸ್ಮಾರಕಕ್ಕೆ ನಮನ ಸಲ್ಲಿಕೆ ಮಾಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್​ನಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗಬೇಕು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೇನೆ. ನಮ್ಮ ತಾತ ದೇವರಾಜ್ ಅರಸುರವರು ಬಡವರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಜನರ ಮನದಲ್ಲಿದ್ದಾರೆ ಎಂದರು.

ನಾನು ಅವರ ಆಶೀರ್ವಾದದಿಂದ ಗೆದ್ದು ಅವರಂತೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲದಿಂದ ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಲಿದೆ. ನನಗೇ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Lok Sabha Election: ಚುನಾವಣಾ ಅಖಾಡಕ್ಕಿಳಿದ ಮಾಜಿ ಸಿಎಂ ದೇವರಾಜ್ ಅರಸು ಮೊಮ್ಮಗ..!

https://newsfirstlive.com/wp-content/uploads/2023/11/SURAJ-HEGDE.jpg

Load More