newsfirstkannada.com

ಬೆಂಗಳೂರು ಬಾಂಬ್ ಬ್ಲಾಸ್ಟ್‌ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಅಲೋಕ್ ಮೋಹನ್; ಹೇಳಿದ್ದೇನು?

Share :

Published March 1, 2024 at 6:00pm

Update March 1, 2024 at 6:01pm

    ಬಾಂಬ್ ಬ್ಲಾಸ್ಟ್‌ನಲ್ಲಿ ರಾಮೇಶ್ವರಂ ಕೆಫೆ ಸಿಬ್ಬಂದಿ, ಗ್ರಾಹಕರಿಗೆ ಗಾಯ

    ರಾಷ್ಟ್ರೀಯ ತನಿಖಾ ದಳ ಹಾಗೂ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ

    ಎಲ್ಲಾ ಸ್ಫೋಟಕ ವಸ್ತುಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿರುವ FSL

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದ್ದು, ಘಟನೆಯ ಬಗ್ಗೆ ಪೊಲೀಸರು ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಕೇಂದ್ರ ಗುಪ್ತಚರ ಇಲಾಖೆಗೂ ಮಾಹಿತಿ ನೀಡಿದ್ದಾರೆ.
ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರಿಂದ ಮಾಹಿತಿ ಪಡೆದ ಅಲೋಕ್ ಮೋಹನ್ ಅವರು, ಇವತ್ತು ಸುಮಾರು ಒಂದು ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಬಾಂಬ್ ಬ್ಲಾಸ್ಟ್‌ನಲ್ಲಿ ರಾಮೇಶ್ವರಂ ಕೆಫೆ ಸಿಬ್ಬಂದಿ ಹಾಗೂ ಗ್ರಾಹಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಯಾರಿಗೂ ಪ್ರಾಣಾಪಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: BREAKING: ಒಂದಲ್ಲ ಎರಡು ಬಾರಿ ಸ್ಫೋಟ.. ಬೆಂಗಳೂರು ಬ್ಲಾಸ್ಟ್ ಬಗ್ಗೆ ದೆಹಲಿ ಇಂಟೆಲಿಜೆನ್ಸ್ ಅಲರ್ಟ್‌!

ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್‌ ಬಗ್ಗೆ ನಾವು ತನಿಖೆ ಮಾಡುತ್ತಾ ಇದ್ದೇವೆ. ಘಟನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಮಾಹಿತಿ ಪಡೆದಿದ್ದಾರೆ. ರಾಮೇಶ್ವರಂ ಕೆಫೆಗೆ ಅಪರಿಚಿತ ವ್ಯಕ್ತಿ ಏನು ತಂದಿದ್ದಾನೆ ಅನ್ನೋದು ಗೊತ್ತಾಗಲಿದೆ. ಈಗಲೇ ನಾವು ಏನು ಹೇಳೋದು ಬೇಡ. ಸ್ಫೋಟ ಸಂಭವಿಸಿದ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ ಭೇಟಿ ನೀಡಿದೆ. ಎಲ್ಲಾ ವಸ್ತುಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ಪೂರ್ಣ ಪರಿಶೀಲನೆ ಬಳಿಕ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು ಬಾಂಬ್ ಬ್ಲಾಸ್ಟ್‌ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಅಲೋಕ್ ಮೋಹನ್; ಹೇಳಿದ್ದೇನು?

https://newsfirstlive.com/wp-content/uploads/2024/03/Alok-Mohan-Dg-IGP.jpg

Load More