/newsfirstlive-kannada/media/post_attachments/wp-content/uploads/2025/01/bigg-boss12.jpg)
ಕನ್ನಡದ ಬಿಗ್ಬಾಸ್ ಶುರುವಾಗಿ ಇಂದಿಗೆ 109ನೇ ದಿನಗಳು ಆಗಿವೆ. ದಿನದಿಂದ ದಿನಕ್ಕೆ ಬಿಗ್ಬಾಸ್ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ಆದ್ರೆ, ಈ ಬಾರಿಯ ಬಿಗ್ಬಾಸ್ ಸ್ಪರ್ಧಿಗಳು ಪದೇ ಪದೇ ರೂಲ್ಸ್ ಬ್ರೇಕ್ ಮಾಡುತ್ತಲೇ ಇದ್ದರು. ಆದ್ರೆ ಇದಕ್ಕೂ ಮಿಗಿಲಾಗಿ ಬಿಗ್ಬಾಸ್ ಕೊಟ್ಟ ಟಾಸ್ಕ್ನಲ್ಲೇ ಮೋಸದಾಟ ಆಡಿದ್ದಾರೆ.
ಇದನ್ನೂ ಓದಿ:ಗವಿಸಿದ್ದೇಶ್ವರ ಜಾತ್ರೆಯ ಸ್ಪೆಷಲ್ ಮಿರ್ಚಿ ಬಜ್ಜಿ.. ಇದರ ವಿಶೇಷತೆ ಏನು ಗೊತ್ತಾ? ಇಂಟ್ರೆಸ್ಟಿಂಗ್ ಮಾಹಿತಿ!
ಹೌದು, ಬಿಗ್ಬಾಸ್ ಮನೆಯಲ್ಲಿ ಸದ್ಯ 8 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ಮೋಕ್ಷಿತಾ, ಮಂಜು, ಗೌತಮಿ. ಹನುಮಂತ, ರಜತ್ ಹಾಗೂ ಧನರಜ್ ಇದ್ದಾರೆ. ಆದರೆ ಈ ವಾರ ಬಿಗ್ಬಾಸ್ ಮನೆಯಲ್ಲಿ ಯಾರೂ ಊಹಿಸಲಾರದ ಟ್ವಿಸ್ಟ್ವೊಂದು ಎದುರಾಗಿದೆ. ಈ ವಾರ ಬಿಗ್ಬಾಸ್ ಸ್ಪರ್ಧಿಗಳಿಗೆ ವಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ ಎಂದು ಎಚ್ಚರಿ ಕೊಟ್ಟಿದ್ದರು.
ಇನ್ನೂ, ನಾಮಿನೇಷನ್ನಿಂದ ತಪ್ಪಿಸಿಕೊಳ್ಳಲು ಬಿಗ್ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ಗಳನ್ನು ನೀಡುತ್ತಾ ಬಂದ್ದಿದ್ದರು. ಅಚ್ಚರಿ ಎಂಬಂತೆ ವಾರದ ಕೊನೆಯ ಟಾಸ್ಕ್ನಲ್ಲಿ ಧನರಾಜ್ ಆಚಾರ್ಯ ಗೆದ್ದುಕೊಂಡು ಈ ವಾರದ ನಾಮಿನೇಷನ್ನಿಂದ ಸೇಫ್ ಆಗಿದ್ದರು. ಇದೀಗ ಬಿಗ್ಬಾಸ್ ಕೊಟ್ಟ ಕೊನೆಯ ಟಾಸ್ಕ್ನಲ್ಲಿ ಧನರಾಜ್ ಕನ್ನಡಿಯನ್ನು ನೋಡಿ ಪಜಲ್ ಗೇಮ್ ಆಡಿದ್ದು ಬೆಳಕಿಗೆ ಬಂದಿದೆ. ಹೀಗಾಗಿ ಬಿಗ್ಬಾಸ್ ಮಿಡ್ ವೀಕ್ ಎಲಿಮಿನೇಷನ್ ತಡೆ ಹಿಡಿದಿದ್ದರು.
View this post on Instagram
ಈ ಬಗ್ಗೆ ಖುದ್ದು ಬಿಗ್ಬಾಸ್ ಮನೆಯವರ ಮುಂದೆ ಅಸಲಿ ಸತ್ಯವನ್ನು ವಿಡಿಯೋ ಮೂಲಕ ಬಿಚ್ಚಿಟ್ಟಿದ್ದಾರೆ. ಬಿಗ್ಬಾಸ್ ಮಾತನ್ನು ಕೇಳಿಸಿಕೊಂಡ ಧನರಾಜ್ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಬಿಗ್ಬಾಸ್ ನನ್ನಿಂದ ಅಷ್ಟು ದೊಡ್ಡ ತಪ್ಪಾಗಿದೆ ಅಂತ ಗೊತ್ತಾಲಿಲ್ಲ. ಆ ಗೆಲುವು ನನ್ನದು ಅಲ್ಲ ಅಂತ ಅನಿಸುತ್ತಿದೆ. ನನ್ನನ್ನೂ ನಾಮಿನೇಟ್ ಮಾಡಿಕೊಂಡೆ ಪ್ರಕ್ರಿಯೆ ಶುರು ಮಾಡಿ ಪ್ಲಿಸ್ ಅಂತ ಬೇಡಿಕೊಂಡಿದ್ದಾರೆ. ಇಂದು ರಾತ್ರಿ ಪ್ರಸಾರವಾಗುವ ಸಂಚಿಕೆಯಲ್ಲಿ ಬಿಗ್ಬಾಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಅಂತ ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ