/newsfirstlive-kannada/media/post_attachments/wp-content/uploads/2025/07/nagalaxmi.jpg)
ಬೆಂಗಳೂರು: ಧರ್ಮಸ್ಥಳದ ಸುತ್ತ ಮುತ್ತ ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣದ ತನಿಖೆಯನ್ನು ನಿನ್ನೆ ರಾಜ್ಯ ಸರ್ಕಾರ ಎಸ್ಐಟಿಗೆ (Special Investigation Team) ವಹಿಸಿತ್ತು. ಈ ಬೆನ್ನಲ್ಲೆ ರಾಜ್ಯ ಮಹಿಳಾ ಆಯೋಗ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ.
ಇದನ್ನೂ ಓದಿ:Breaking: ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ
ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಎಸ್ಐಟಿ ರಚನೆ ಮಾಡುವಂತೆ ಜುಲೈ 14ರಂದು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದರು. ಆ ಬೆನ್ನಲ್ಲೇ ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಹೀಗಾಗಿ ಎಸ್ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ. ಇನ್ನೂ, ಈ ಕೇಸ್ ಸಂಬಂಧ ಮಹಿಳಾ ಆಯೋಗ ಒಂದಷ್ಟು ವಿಚಾರದ ಬಗ್ಗೆ ಆಗ್ರಹಿಸಿದೆ.
ಮಹಿಳಾ ಆಯೋಗ ಆಗ್ರಹ ಏನು?
ಧರ್ಮಸ್ಥಳ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ ಐಟಿಗೆ ವಹಿಸಿದೆ. ಇದರ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ರಾಜ್ಯ ಮಹಿಳಾ ಆಯೋಗ, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗವು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯಾಗಬೇಕು. ಒಂದು ವೇಳೆ ಆರೋಪ ನಿಜವಾದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ತಮ್ಮವರನ್ನ ಕಳೆದುಕೊಂಡ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಮೂಲಕ ಇದು ಒಂದು ದೊಡ್ಡ ಪಾಠವಾಗಬೇಕು. ಅಮಾಯಕರ ಜೀವದ ಜೊತೆ ಚೆಲ್ಲಾಟವಾಡೋರಿಗೆ ಪಾಠವಾಗಬೇಕು. ಪ್ರತಿಯೊಂದು ಹೆಣ್ಣುಮಗು ಭಯಮುಕ್ತರಾಗಿ ಬದುಕುವಂತ ವಾತಾವರಣಸೃಷ್ಟಿಯಾಗಬೇಕು. ಯಾವುದೇ ಹೆಣ್ಣಿಗೂ ಈ ನೆಲದಲ್ಲಿ ಅನ್ಯಾಯವಾಗಬಾರದು. ಒಂದು ವೇಳೆ ತೊಂದರೆಯಾದ್ರೆ ಅನ್ಯಾಯದ ವಿರುದ್ಧ ಧ್ವನಿ ಎತ್ತುವಂತಹ ಭಯ ಮುಕ್ತ ವಾತಾವರಣ ಸೃಷ್ಟಿಯಾಗಬೇಕು ಎಂದು ಎಂದು ಮಹಿಳಾ ಆಯೋಗ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ