KAS ಮರು ಪರೀಕ್ಷೆಗೆ ಆಗ್ರಹಿಸಿ ಧಾರವಾಡದಿಂದ ಬೆಂಗಳೂರಿಗೆ ಪಾದಯಾತ್ರೆ.. ಸುಡು ಬಿಸಿಲನ್ನೂ ಲೆಕ್ಕಿಸದೆ ಪ್ರತಿಭಟನೆ..!

author-image
Ganesh
Updated On
KAS ಮರು ಪರೀಕ್ಷೆಗೆ ಆಗ್ರಹಿಸಿ ಧಾರವಾಡದಿಂದ ಬೆಂಗಳೂರಿಗೆ ಪಾದಯಾತ್ರೆ.. ಸುಡು ಬಿಸಿಲನ್ನೂ ಲೆಕ್ಕಿಸದೆ ಪ್ರತಿಭಟನೆ..!
Advertisment
  • ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಟನೆ
  • ಪಾದಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ
  • ಬರೋಬ್ಬರಿ 11 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ

ಕೆಎಎಸ್​ ಮರು ಪರೀಕ್ಷೆ ಅಥವಾ ಮರು ಅಧಿಸೂಚನೆ ಮತ್ತು ಭ್ರಷ್ಟಾಚಾರ ಮುಕ್ತ ನೇಮಕಾತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ ಬೃಹತ್ ಪಾದಯಾತ್ರೆಗೆ ಕರೆ ನೀಡಿದೆ. ಧಾರವಾಡದಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಯಲಿದೆ.

publive-image

ನಿನ್ನೆ ಬೃಹತ್ ಪ್ರತಿಭಟನಾ ಯಾತ್ರೆಗೆ ಚಾಲನೆ ನೀಡಲಾಗಿದೆ. ನೂರಾರು ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷಾರ್ಥಗಳು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಸುಡು ಬಿಸಿಲನ್ನೂ ಲೆಕ್ಕಿಸದೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಬಾವುಟ, ಕನ್ನಡ ಶಾಲು ಹಾಗೂ ಕನ್ನಡ ಪರ ಘೋಷಣೆಗಳನ್ನು ಕೂಗುತ್ತ ಪ್ರತಿಭಟನಾಕಾರರು ಹೆಜ್ಜೆ ಹಾಕುತ್ತಿದ್ದಾರೆ. ಧಾರವಾಡ ವಿವಿಯಿಂದ ಹೊರಟಿರುವ ಈ ಪಾದಯಾತ್ರೆಯು 11 ದಿನಗಳ ಕಾಲ ನಡೆಯಲಿದೆ.

ಇದನ್ನೂ ಓದಿ:KPSC Exam: ಮತ್ತೆ KAS ಮರು ಪರೀಕ್ಷೆ..? ರಾಜ್ಯಪಾಲರು ನೀಡಿದ ಭರವಸೆ ಏನು?

publive-image

ಗೆಜೆಟೆಡ್ ಪ್ರೊಭೇಷನರಿ 384 ಹುದ್ದೆಗಳ ನೇಮಕಾತಿಗೆ ಮೇ 3, 5, 7 ಹಾಗೂ 9 ರಂದು ಮುಖ್ಯ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 29 ರಂದು ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ 1:15 ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು ಕೆಪಿಎಸ್​​ಸಿ ಈಗಾಗಲೇ ಬಿಡುಗಡೆ ಮಾಡಿದೆ.

ಆಗಿದ್ದೇನು..?

ಕಳೆದ ಡಿಸೆಂಬರ್ 29 ರಂದು 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಯಲ್ಲಿ ಕೆಪಿಎಸ್​ಸಿ ಕನ್ನಡದ ಕಗ್ಗೊಲೆ ಮಾಡಿದೆ ಎಂಬ ಆರೋಪವನ್ನು ಪರೀಕ್ಷಾರ್ಥಿಗಳು ಮಾಡಿದ್ದಾರೆ. KAS ಪ್ರಶ್ನೆ ಪತ್ರಿಕೆಯ ಭಾಷಾಂತರದಲ್ಲಿ 79 ಪ್ರಶ್ನೆಗಳು ತಪ್ಪಾಗಿದೆ. ಇದರಿಂದಾಗಿ ಸಾವಿರಾರು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿದೆ ಅನ್ನೋದು ಆರೋಪ. ಇದಕ್ಕೆ ಪುಷ್ಟಿ ಕೊಡುವಂತೆ KAS ಪ್ರಿಲಿಮ್ಸ್ ಅರ್ಹ ಅಭ್ಯರ್ಥಿಗಳ ಆಯ್ಕೆಯಲ್ಲಿ ಕನ್ನಡಿಗರ ಸಂಖ್ಯೆ ಕುಸಿತವಾಗಿದೆ. ಇದಕ್ಕೆ ಕಾರಣ ಪ್ರಶ್ನೆ ಪತ್ರಿಕೆಯಲ್ಲಿ ಆಗಿರುವ ದೋಷವೇ ಕಾರಣ. ಆಗಿರುವ ದೋಷ ಸರಿಪಡಿಸಲು ಮರು ಪರೀಕ್ಷೆ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: Breaking: ಕೆಎಎಸ್ ಪ್ರಿಲಿಮ್ಸ್​ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಮರು ಪರೀಕ್ಷೆ ನಡೆಯುತ್ತಾ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment