/newsfirstlive-kannada/media/post_attachments/wp-content/uploads/2024/03/Faf_Kohli_RCB.jpg)
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಇನ್ನೇನು 7 ತಿಂಗಳು ಬಾಕಿ ಇದೆ. ವರ್ಷದ ಕೊನೆಗೆ ನಡೆಯಲಿರೋ ಮೆಗಾ ಆಕ್ಷನ್ನಲ್ಲಿ ಬಲಿಷ್ಠ ಆಟಗಾರರನ್ನು ಖರೀದಿ ಮಾಡಲು ಆರ್ಸಿಬಿ ಮುಂದಾಗಿದೆ. ಅದರಲ್ಲೂ ಕ್ಯಾಪ್ಟನ್ ಫಾಫ್ಗೆ ಕೊಕ್ ನೀಡಲಿದ್ದು, ಆರ್ಸಿಬಿ ತಂಡದ ಮುಂದಿನ ಕ್ಯಾಪ್ಟನ್ಗಾಗಿ ಹುಡುಕಾಟ ನಡೆಸಬಹುದು.
ಇದರ ಮಧ್ಯೆ ಟಿ20 ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಆಗಿದ್ದಾರೆ ಅನ್ನೋ ಬೇಸರದಲ್ಲಿರೋ ಫ್ಯಾನ್ಸ್ಗೆ ಗುಡ್ನ್ಯೂಸ್ ಒಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೊಹ್ಲಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದೆ. ಸದ್ಯ ಕೊಹ್ಲಿ ಅಂತರಾಷ್ಟ್ರೀಯ ಮಹತ್ವದ ಜವಾಬ್ದಾರಿಗಳಿಂದ ಮುಕ್ತರಾಗಿದ್ದು, ಐಪಿಎಲ್ನಲ್ಲಿ ಮತ್ತೆ ಆರ್ಸಿಬಿ ತಂಡವನ್ನು ಮುನ್ನಡೆಸಲು ಕೊಹ್ಲಿಗೆ ಮನವರಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಈಗ 40 ವರ್ಷ. ಹಾಗಾಗಿ ಐಪಿಎಲ್ನಿಂದ ಫಾಫ್ ನಿವೃತ್ತಿ ಆಗೋ ಸಾಧ್ಯತೆ ಇದೆ. ಇದಾದ ಬಳಿಕ ಆರ್ಸಿಬಿ ತಂಡಕ್ಕೆ ಹೊಸ ಕ್ಯಾಪ್ಟನ್ ಬೇಕಿದ್ದಾರೆ. ಆದ್ದರಿಂದ ಮುಂದಿನ ಸೀಸನ್ಗೆ ಕೊಹ್ಲಿ ಅವರಿಗೆ ಆರ್ಸಿಬಿ ಪಟ್ಟ ನೀಡಲು ಫ್ರಾಂಚೈಸಿ ನಿರ್ಧಾರ ಮಾಡಿದೆ ಅನ್ನೋ ಸುದ್ದಿ ಹರಿದಾಡುತ್ತಿದೆ.
ರೋಹಿತ್ ಶರ್ಮಾ ಕ್ಯಾಪ್ಟನ್ಸಿಗೆ ಆರ್ಸಿಬಿ ಫ್ಯಾನ್ಸ್ ಒತ್ತಾಯ
ಇನ್ನೊಂದೆಡೆ ವಿರಾಟ್ ಕೊಹ್ಲಿಗೆ ಕ್ಯಾಪ್ಟನ್ಸಿ ಒತ್ತಡ ಬೇಡ. ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬಳಿಕ ಐಪಿಎಲ್ ಆಡೋದಾಗಿ ಹೇಳಿದ್ದಾರೆ. ಮುಂದಿನ ಸೀಸನ್ ವೇಳೆಗೆ ರೋಹಿತ್ ಮುಂಬೈ ಇಂಡಿಯನ್ಸ್ ತೊರೆಯೋದು ಗ್ಯಾರಂಟಿ. ಆಕ್ಷನ್ನಲ್ಲಿ ಆರ್ಸಿಬಿ ರೋಹಿತ್ ಶರ್ಮಾ ಅವರನ್ನು ಖರೀದಿ ಮಾಡಲಿ. ರೋಹಿತ್ ಕ್ಯಾಪ್ಟನ್ ಆಗಲಿ, ಕೊಹ್ಲಿ ಆರ್ಸಿಬಿ ಪರ ಚೆನ್ನಾಗಿ ಆಡಿ ಕಪ್ ಗೆಲ್ಲಿಸಲಿ ಎಂದು ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್ ಮಾಡುತ್ತಿದ್ದಾರೆ.
ದಿನೇಶ್ ಕಾರ್ತಿಕ್ ಹೇಳಿದ್ದೇನು?
ಆರ್ಸಿಬಿ ತಂಡದ ಮೆಂಟರ್ ಮತ್ತು ಬ್ಯಾಟಿಂಗ್ ಕೋಚ್ ಆಗಿರೋ ದಿನೇಶ್ ಕಾರ್ತಿಕ್ ಅವರಿಗೆ ರೋಹಿತ್ ಶರ್ಮಾ ಬಗ್ಗೆ ಕೇಳಲಾಯ್ತು. ಮುಂದಿನ ಸೀಸನ್ನಲ್ಲಿ ರೋಹಿತ್ ಶರ್ಮಾ ಆರ್ಸಿಬಿ ಕ್ಯಾಪ್ಟನ್ ಆಗಲಿದ್ದಾರಾ? ಅನ್ನೋ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಕಾರ್ತಿಕ್, ಇದು ಮ್ಯಾನೇಜ್ಮೆಂಟ್ ನಿರ್ಧಾರ ಎಂದಿದ್ದಾರೆ. ಅಷ್ಟೇ ಅಲ್ಲ ಆರ್ಸಿಬಿ ಈಗಾಗಲೇ ಹಲವರ ಮೇಲೆ ಕಣ್ಣಿಟ್ಟಿದ್ದು, ನಾಯಕತ್ವ ಗುಣಗಳನ್ನು ಹೊಂದಿರೋ ಅವರನ್ನೇ ಕ್ಯಾಪ್ಟನ್ ಮಾಡಲಿದ್ದಾರೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ