newsfirstkannada.com

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್​..!

Share :

13-06-2023

  ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

  ಹಿಂದಿನ ಸರ್ಕಾರದಿಂದ CBI ತನಿಖೆಗೆ ಶಿಫಾರಸು

  ಸಿಬಿಐ ತನಿಖೆಯ ಹಿನ್ನಲೆ ಏನು ಗೊತ್ತಾ..?

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್​​ನ ಮುಖ್ಯ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ. ಕೋರ್ಟ್​ ಆದೇಶ ಬೆನ್ನಲ್ಲೇ ಶಿವಕುಮಾರ್​ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ಜೂ. 17ರವರೆಗೂ ಮಧ್ಯಂತರ ತಡೆ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಪ್ರಕರಣದ ತನಿಖೆ ನಡೆಸುವಂತೆ ಹಿಂದಿನ ಬಿಎಸ್​ವೈ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಹೈಕೋರ್ಟ್​ನ ಏಕಸದಸ್ಯ ಪೀಠವು ಸರ್ಕಾರದ ಕ್ರಮವನ್ನು ಅಂದು ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶಿವಕುಮಾರ್, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಏಕಸದಸ್ಯ ನ್ಯಾಯಪೀಠದ ತೀರ್ಪಿಗೆ ಇದೀಗ ವಿಚಾರಣೆ ನಡೆಸಿದ ಸಿಜೆ ಪ್ರಸನ್ನ ಬಾಲಚಂದ್ರ ವರಾಳೆ & ನ್ಯಾ. ಎಂ.ಜಿ.ಎಸ್‌ ಕಮಲ್‌ ಅವರ ಮುಖ್ಯ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಜೂನ್ 17ರವರೆಗೂ ಮಧ್ಯಂತರ ತಡೆ ನೀಡಿದೆ. ಜೊತೆಗೆ ಡಿ.ಕೆ.ಶಿವಕುಮಾರ್ ಮೇಲ್ಮನವಿಗೆ ಉತ್ತರಿಸುವಂತೆ ಸಿಬಿಐ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಕೂಡ ಜಾರಿ ಮಾಡಿದೆ.

ಏನಿದು ಪ್ರಕರಣ?

2017 ಆಗಸ್ಟ್​ 2 ರಂದು ಡಿ.ಕೆ.ಶಿವಕುಮಾರ್​ಗೆ ಸಂಬಂಧಿಸಿದ ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿತ್ತು. ಐಟಿ ಅಧಿಕಾರಿಗಳ ಶೋಧ ಕಾರ್ಯಾಚರಣೆ ವೇಳೆ 8.59 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು. ಹೀಗಾಗಿ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಿದ್ದರು.

ಐಟಿ ಅಧಿಕಾರಿಗಳ ಕ್ರಮ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೂಡ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು 2019 ಸೆಪ್ಟೆಂಬರ್ 3 ರಂದು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. 2019, ಸೆಪ್ಟೆಂಬರ್ 9ರಂದು ಇ.ಡಿ. ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರವನ್ನು ಆಧರಿಸಿ ಹಿಂದಿನ ಬಿಎಸ್​ವೈ ಸರ್ಕಾರ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಸರ್ಕಾರದ ಆದೇಶವನ್ನು ರದ್ದು ಮಾಡುವಂತೆ ಡಿ.ಕೆ.ಶಿವಕುಮಾರ್​ ಅರ್ಜಿ ಸಲ್ಲಿಸಿದ್ದರು. 2023, ಏಪ್ರಿಲ್ 20 ರಂದು ನ್ಯಾಯಮೂರ್ತಿ ಆರ್​.ನಟರಾಜನ್ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದೀಗ ಅದನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್​..!

https://newsfirstlive.com/wp-content/uploads/2023/06/DKSHIVAKUMAR-1.jpg

Load More