newsfirstkannada.com

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ರಾ? ಅಧಿಕಾರಿಗಳಿಗೆ DKS ಕ್ಲಾಸ್..!

Share :

23-05-2023

    ಭದ್ರತಾ ಅಧಿಕಾರಿಗಳಿಗೆ DCM ಡಿ.ಕೆ.ಶಿವಕುಮಾರ್ ಕ್ಲಾಸ್!

    CM ಸಿದ್ದರಾಮಯ್ಯ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

    ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ರಾ?

ಬೆಂಗಳೂರು: ‘ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು?’ ಎಂದು ಭದ್ರತಾ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಲಾಸ್ ತೆಗೆದುಕೊಂಡ ಪ್ರಸಂಗ ಇಂದು ನಡೆಯಿತು.ಈ ಹಿಂದಿನ ಸರ್ಕಾರದಲ್ಲಿ ವಿಜಯಪುರ ಗ್ರಾಮೀಣ ಠಾಣೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹಿಂದೂ ಸಂಘಟನೆ ಮುಖಂಡರಂತೆ ಕೇಸರಿ ಶಾಲು, ಬಿಳಿಟೋಪಿ, ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿ ಸಾಮೂಹಿಕವಾಗಿ ಫೋಟೋ ತೆಗೆಸಿಕೊಂಡಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರದಲ್ಲಿ ಕೇಸರಿಕರಣಕ್ಕೆ ಅವಕಾಶ ಕೊಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು, ಬಿಜಾಪುರ, ಬಾಗಲಕೋಟೆಯಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಎಂದು ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ಬಿಡಲ್ಲ ಎಂದು ವಾರ್ನಿಂಗ್ ಮಾಡಿದ್ದಾರೆ.

PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ OMR ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರಿಗೆ ಕಿರುಕುಳ ನೀಡಿದ್ರಿ. ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಿ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು‌ ಮಾಡಿದ್ದೀರ ನೀವು. ಎಲ್ಲಿ ನೋಡಿದ್ರೂ ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರ್ಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು ಎಂದು ತರಾಟೆ ತೆಗೆದುಕೊಂಡರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ರಾ? ಅಧಿಕಾರಿಗಳಿಗೆ DKS ಕ್ಲಾಸ್..!

https://newsfirstlive.com/wp-content/uploads/2023/05/DKS_POLICE.jpg

Load More